ಉದಯವಾಹಿನಿ,ಬೆಂಗಳೂರು:  ವಿದ್ಯಾರ್ಥಿಗಳ ಬ್ಯಾಗ್ ಹೊರೆ ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮವನ್ನು ತೆಗೆದುಕೊಳ್ಳುವುದಕ್ಕೆ ಮುಂದಾಗಿದೆ ಈ ನಿಟ್ಟಿನಲ್ಲಿ, ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹೊರೆಯಿಲ್ಲದೇ ಸಂತಸದಾಯಕವಾಗಿ ಕಲಿಸಿ ವಾತಾವರಣವನ್ನು ರೂಪಿಸುವ ಸಲುವಾಗಿ Centre for Child and Law, NLSI, ಬೆಂಗರಿ ರವರ ಸಹಯೋಗದೊಂದಿಗೆ ಡಿ.ಎಸ್.ಇ.ಆರ್.ಟಿ ರವರು ಒಂದು ಅಧ್ಯಯನ ನಡೆಸಿ ವರದಿಯಲ್ಲಿ ಸರ್ಕಾರಕ್ಕೆ ಸಲ್ಲಿಸಿರುತ್ತಾರೆ. ವರದಿಯಲ್ಲಿ ವಿದ್ಯಾರ್ಥಿಗಳು ಅವರ ದೇಹದ ತೂಕದ ಶೇಕಡ 10 ರಿಂದ 15%ರಷ್ಟು ತೂಕದ ಶಾಲಾ ಬ್ಯಾಗ್‌ಗಳನ್ನು ತೆಗೆದುಕೊಂಡು ಹೋಗಬಹುದಾಗಿ ಮೂಳೆ ತಜ್ಞರು ಶಿಫಾರಸ್ಸು ಮಾಡಿರುತ್ತಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಎಲ್ಲಾ ಶಾಲೆಗಳಲ್ಲಿ 1ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ಕಡಿಮೆ ಮಾಡಲು ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!