ಉದಯವಾಹಿನಿ, ಬೆಂಗಳೂರು: ಗಾಳಿ ಆಂಜನೇಯ ದೇವಸ್ಥಾನ ಮುಜರಾಯಿ ವ್ಯಾಪ್ತಿಗೆ ಬಂದ ಬೆನ್ನಲ್ಲೆ ಭಕ್ತರಿಗೆ ಗುಡ್ ನ್ಯೂಸ್ ನೀಡಿದೆ. ಶೀಘ್ರದಲ್ಲೇ ಹೋಮ, ಹವನ ಮಾಡಿಸಲು ಆನ್‌ಲೈನ್ ಬುಕ್ಕಿಂಗ್ ಸೇವೆಯನ್ನು ಆರಂಭಿಸಲು ಮುಂದಾಗಿದೆ. ಮುಜರಾಯಿ ಇಲಾಖೆ ಆಯುಕ್ತ ವೆಂಕಟೇಶ್ ಅವರು `ಪಬ್ಲಿಕ್ ಟಿವಿ’ ಜೊತೆ ಮಾತನಾಡಿ, ಗಾಳಿ ಆಂಜನೇಯ ದೇವಸ್ಥಾನದ ಯಂತ್ರ, ಪ್ರಸಾದವನ್ನು ಆನ್‌ಲೈನ್ ಮೂಲಕ ರಾಜ್ಯದ ಮೂಲೆ ಮೂಲೆಗೂ ತಲುಪಿಸಲು ಮುಜರಾಯಿ ಇಲಾಖೆ ನಿರ್ಧರಿಸಿದೆ. ಜೊತೆಗೆ ಹೋಮ, ಹವನ ಮಾಡಿಸಲು ಶೀಘ್ರದಲ್ಲೇ ಆನ್‌ಲೈನ್ ಬುಕ್ಕಿಂಗ್ ಸೇವೆಯನ್ನು ಆರಂಭಿಸಲು ಮುಂದಾಗಿದೆ ಎಂದು ತಿಳಿಸಿದ್ದಾರೆ.
ಇನ್ನೂ ದೇಗುಲ ಮುಜರಾಯಿ ವ್ಯಾಪ್ತಿಗೆ ಸೇರಿದ ಬಳಿಕ ಭಕ್ತರ ಸಂಖ್ಯೆಯಲ್ಲಿ ಹೆಚ್ಚಾಗಿದೆ. ಅಲ್ಲದೇ ಪೂಜಾದರ, ಹೋಮ, ಹವನ, ಪ್ರಸಾದ ದರದಲ್ಲಿ ಯಾವುದೇ ವ್ಯತ್ಯಾಸ ಇಲ್ಲ. ಹೀಗಾಗಿ ಆನ್‌ಲೈನ್ ಮೂಲಕ ಎಲ್ಲಾ ಸೇವೆಗಳನ್ನು ಭಕ್ತರಿಗೆ ಸಿಗುವಂತೆ ಮಾಡಲು ಮುಜರಾಯಿ ಇಲಾಖೆ ಮುಂದಾಗಿದೆ ಎಂದಿದ್ದಾರೆ.
