ಉದಯವಾಹಿನಿ, ಹೈದರಾಬಾದ್: ಎರಡು ವರ್ಷಗಳ ಹಿಂದೆ ತಮ್ಮದೇ ‘ಯುವಜನ ಶ್ರಮಿಕ ರೈತು ತೆಲಂಗಾಣ ಪಕ್ಷ’ ಸ್ಥಾಪಿಸಿದ್ದ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ, ತಮ್ಮ ಪಕ್ಷವನ್ನು ಕಾಂಗ್ರೆಸ್ ಜತೆ ವಿಲೀನಗೊಳಿಸಲು ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ. ತೆಲಂಗಾಣ ಮತ್ತು ಆಂಧ್ರಪ್ರದೇಶ ಎರಡೂ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗಳು ಸನ್ನಿಹಿತವಾಗುತ್ತಿರುವ ಸಂದರ್ಭದಲ್ಲಿ ಶರ್ಮಿಳಾ ಅವರ ನಡೆ ಕುತೂಹಲ ಮೂಡಿಸಿದೆ. ತಾವು ಖಮ್ಮಮ್ ಜಿಲ್ಲೆಯ ಪಲೈರ್ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಶರ್ಮಿಳಾ ಅವರು ಈಗಾಗಲೇ ಘೋಷಿಸಿದ್ದಾರೆ. ವೈಎಸ್‌ಆರ್‌ಟಿಪಿ ಪಕ್ಷದ ಇನ್ನೂ ಕೆಲವು ನಾಯಕರಿಗೆ ಕೂಡ ಕಾಂಗ್ರೆಸ್ ಟಿಕೆಟ್ ಸಿಗುವ ನಿರೀಕ್ಷೆ ಇದೆ.

ಶರ್ಮಿಳಾ ಅವರು ಮುಖ್ಯವಾಗಿ ತೆಲಂಗಾಣದಲ್ಲಿ ಆಡಳಿತಾರೂಢಕೆ ಚಂದ್ರಶೇಖರ್ ಅವರ ಬಿ ಆರ್ ಎಸ್ ಪಕ್ಷದ ವಿರುದ್ಧದ ಹೋರಾಟದಲ್ಲಿ ಗುರುತಿಸಿಕೊಂಡಿದ್ದರು. ಈ ವರ್ಷದ ಅಂತ್ಯದಲ್ಲಿ ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗಿಂತಲೂ ಕೆಸಿಆರ್‌ಗೆ ಪ್ರಮುಖ ಎದುರಾಳಿಯಾಗಿ ಶರ್ಮಿಳಾ ಅವರ ಪಕ್ಷ ನಿಲ್ಲಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅವರಿಗೆ ಪಕ್ಷ ಸಂಘಟನೆ ಅಷ್ಟು ಸುಲಭವಾಗಿಲ್ಲ. ಹೀಗಾಗಿ ಕೆಲವು ಸಮಯದಿಂದ ಕಾಂಗ್ರೆಸ್ ಜತೆಗಿನ ವಿಲೀನದ ಸುದ್ದಿ ಹರಿದಾಡುತ್ತಿದೆ.

Leave a Reply

Your email address will not be published. Required fields are marked *

error: Content is protected !!