ಉದಯವಾಹಿನಿ, ನವದೆಹಲಿ: ತೆರಿಗೆ ಹಂಚಿಕೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ ಮಾಡಲಾಗುತ್ತಿದೆ ಎಂದು ಆರೋಪಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು. ಕೆಪಿಸಿಸಿ ಕಾನೂನು ವಿಭಾಗದ ಅಧ್ಯಕ್ಷ ಸಿ.ಎಂ.ಧನಂಜಯ ನೇತೃತ್ವದಲ್ಲಿ 200ಕ್ಕೂ ಅಧಿಕ ವಕೀಲರು ಪ್ರತಿಭಟನೆ ನಡೆಸಿದ್ದಾರೆ.ಪ್ರತಿಭಟನೆಗೂ ಮುನ್ನ ಔಪಚಾರಿಕವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕಚೇರಿಗೆ ಮನವಿ ಪತ್ರ ಸಲ್ಲಿಕೆ ಮಾಡಲಾಯಿತು. ಪ್ರತಿಭಟನೆಯಲ್ಲಿ ಭಾಗಿಯಾದ ದೆಹಲಿ ವಿಶೇಷ ಪ್ರತಿನಿಧಿ ಟಿಬಿ ಜಯಚಂದ್ರ, ಬಿ.ಟಿ ಲಲಿತಾ ನಾಯಕ್ ಸೇರಿ ಹಲವು ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿ, ಕರ್ನಾಟಕಕ್ಕೆ ಆಗಿರುವ ಅನ್ಯಾಯ ಕೂಡಲೇ ಸರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಪ್ರತಿಭಟನೆ ವೇಳೆ ಸಿ.ಎಂ.ಧನಂಜಯ ಮಾತನಾಡಿ, ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ತೀವ್ರ ಅನ್ಯಾಯವಾಗುತ್ತಿದೆ. ತೆರಿಗೆ ಪಾಲು ಹಂಚಿಕೆ ಮತ್ತು ಅನುದಾನ ನೀಡುವಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ, ಕನ್ನಡಿಗರನ್ನು ಮಲತಾಯಿ ಮಕ್ಕಳಂತೆ ನೋಡುತ್ತಿದೆ ಎಂದು ದೂರಿದ್ದಾರೆ.

Leave a Reply

Your email address will not be published. Required fields are marked *

error: Content is protected !!