ಉದಯವಾಹಿನಿ, ಪಾಟ್ನಾ: ವಿದ್ಯುತ್‌ ಸೇರಿದಂತೆ ಈಗಾಗಲೇ ಹಲವು ಉಚಿತ ಭರವಸೆ ನೀಡಿರುವ ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ನೇತೃತ್ವದ ಸರ್ಕಾರ ಚುನಾವಣೆಗೆ ಮುನ್ನ ಮತ್ತೊಂದು ಬಂಪರ್‌ ಕೊಡುಗೆ ಘೋಷಣೆ ಮಾಡಿದೆ. ಬಿಸಿಯೂಟ ತಯಾರಕರು, ರಾತ್ರಿ ಕಾವಲುಗಾರರು ಹಾಗೂ ಗೌರವ ಧನವನ್ನ ಹೆಚ್ಚಳ ಮಾಡಿದೆ.ಹೌದು. ಶಿಕ್ಷಣ ವ್ಯವಸ್ಥೆ ಬಲಪಡಿಸುವಲ್ಲಿ ಅಡುಗೆಯವರು (ಬಿಸಿಯೂಟ ತಯಾರಕರು), ರಾತ್ರಿ ಕಾವಲುಗಾರರು ಮತ್ತು ದೈಹಿಕ ಶಿಕ್ಷಣ ಮತ್ತು ಆರೋಗ್ಯ ಬೋಧಕರು ಪ್ರಮುಖ ಪಾತ್ರ ವಹಿಸಿದ್ದಾರೆ. ಇದನ್ನ ಗಮನದಲ್ಲಿಟ್ಟುಕೊಂಡು, ಈ ಕಾರ್ಮಿಕರ ಗೌರವಧನವನ್ನ ದ್ವಿಗುಣಗೊಳಿಸುವ ಮೂಲಕ ಗೌರವಾನ್ವಿತ ಹೆಚ್ಚಳ ಮಾಡಲು ನಾವು ನಿರ್ಧರಿಸಿದ್ದೇವೆ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ನಿತೀಶ್‌ ಪೋಸ್ಟ್‌ ಹಂಚಿಕೊಂಡಿದ್ದಾರೆ.

ನಿತೀಶ್‌ ಕುಮಾರ್‌ ಎಕ್ಸ್‌ನಲ್ಲಿ ಏನಿದೆ?
2005ರ ನವೆಂಬರ್‌ನಲ್ಲಿ ನಮ್ಮ ಸರ್ಕಾರ ರಚನೆಯಾದಾಗಿನಿಂದ, ನಾವು ಶಿಕ್ಷಣ ವ್ಯವಸ್ಥೆಯನ್ನ ಸುಧಾರಿಸಲು ನಿರಂತರವಾಗಿ ಕೆಲಸ ಮಾಡುತ್ತಿದ್ದೇವೆ. 2005 ರಲ್ಲಿ ಶಿಕ್ಷಣದ ಒಟ್ಟು ಬಜೆಟ್ 4,366 ಕೋಟಿ ರೂ.ಗಳಾಗಿದ್ದು, ಈಗ ಅದು 77,690 ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಹೆಚ್ಚಿನ ಸಂಖ್ಯೆಯ ಶಿಕ್ಷಕರ ನೇಮಕಾತಿ, ಹೊಸ ಶಾಲಾ ಕಟ್ಟಡಗಳ ನಿರ್ಮಾಣ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಯಿಂದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ವ್ಯಾಪಕ ಸುಧಾರಣೆ ಕಂಡುಬಂದಿದೆ.

Leave a Reply

Your email address will not be published. Required fields are marked *

error: Content is protected !!