ಉದಯವಾಹಿನಿ, ಸಾಲು ಸಾಲು ಹಿಟ್ ಸಿನಿಮಾಗಳನ್ನು ನೀಡುತ್ತಿರುವ ತೆಲುಗಿನ ಖ್ಯಾತ ಚಿತ್ರನಿರ್ಮಾಣ ಸಂಸ್ಥೆ ಸಿತಾರಾ ಎಂಟರ್ಟೈನ್ಮೆಂಟ್ಸ್, ಇದೀಗ ಮತ್ತೊಂದು ದೊಡ್ಡ ಪ್ರಾಜೆಕ್ಟ್ ಜೊತೆಗೆ ಆಗಮಿಸುತ್ತಿದೆ. ‘ಪ್ರೊಡಕ್ಷನ್ ನಂಬರ್ 36’ ಹೆಸರಿನ ಬಿಗ್ ಬಜೆಟ್ ಸಿನಿಮಾ ಘೋಷಣೆ ಮಾಡಿದೆ. ಈ ಮೂಲಕ ಕನ್ನಡ ಸಿನಿಮಾ ನಿರ್ಮಾಣಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಐತಿಹಾಸಿಕ ಆಕ್ಷನ್ ಡ್ರಾಮಾ ಹಿನ್ನೆಲೆಯ ಈ ಸಿನಿಮಾದಲ್ಲಿ ಸ್ಯಾಂಡಲ್‌ವುಡ್‌ನ ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ನಾಯಕನಾಗಿ ನಟಿಸಲಿದ್ದಾರೆ. ಚಿತ್ರದ ಅನೌನ್ಸ್‌ಮೆಂಟ್ ಪೋಸ್ಟರ್ ಸಹ ರಿಲೀಸ್ ಆಗಿದೆ.
’ಕಾಂತಾರ’ ಸಿನಿಮಾದ ಮೂಲಕ ಭಾರತೀಯ ಚಿತ್ರರಂಗವನ್ನೇ ಬೆರಗುಗೊಳಿಸಿದ ನಟ ರಿಷಬ್ ಶೆಟ್ಟಿ, ಈಗ ‘ಕಾಂತಾರ-1’ ಚಿತ್ರಕ್ಕಾಗಿ ತಯಾರಿ ನಡೆಸುತ್ತಿದ್ದಾರೆ. ಈ ನಡುವೆಯೇ ಸಿತಾರ ಎಂಟರ್ಟೈನ್ಮೆಂಟ್ ಹಾಗೂ ಫಾರ್ಚೂನ್ ಫೋರ್ ಸಿನೆಮಾಸ್ ಜಂಟಿಯಾಗಿ ಹೊಸ ಪ್ರಾಜೆಕ್ಟ್ ಕೈಗೆತ್ತಿಕೊಂಡಿದ್ದು, 18ನೇ ಶತಮಾನದ ಕಥೆ ಹೇಳಲು ಮುಂದಾಗಿದ್ದಾರೆ.
ಈ ಐತಿಹಾಸಿಕ ಸಿನಿಮಾದ ನಿರ್ದೇಶನದ ಹೊಣೆ ಹೊತ್ತಿರುವವರು ನಿರ್ದೇಶಕ ಅಶ್ವಿನ್ ಗಂಗರಾಜು. ‘ಪ್ರೊಡಕ್ಷನ್ ನಂ.36’ ಮೂಲಕ ಈ ಬಾರಿ ಇನ್ನಷ್ಟು ಭರ್ಜರಿ ದೃಶ್ಯ ವೈಭವದ ಕಥಾನಕವನ್ನು ತೆರೆ ಮೇಲೆ ತರುವುದಾಗಿ ನಿರ್ಧರಿಸಿದ್ದಾರೆ. ಈ ಚಿತ್ರವನ್ನು ಕನ್ನಡ ಮತ್ತು ತೆಲುಗಿನಲ್ಲಿ ಒಂದೇ ಸಮಯದಲ್ಲಿ ಚಿತ್ರೀಕರಿಸಲು ಪ್ಲಾನ್ ಮಾಡಲಾಗಿದೆ. ಇನ್ನುಳಿದಂತೆ ತಮಿಳು, ಹಿಂದಿ ಮತ್ತು ಮಲೆಯಾಳಂ ಭಾಷೆಗಳಿಗೆ ಡಬ್ ಆಗಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ.

Leave a Reply

Your email address will not be published. Required fields are marked *

error: Content is protected !!