ಉದಯವಾಹಿನಿ,ದಾವಣಗೆರೆ: ಸಾರ್ವಜನಿಕರು ಯಾವುದೇ ರೀತಿಯ ಮನಸ್ಸಿನ ಮೇಲೆ ಪರಿಣಾಮ ಬೀರುವಂತಹ ವಿಷಯವಿದ್ದರೆ 14416ಗೆ ಕರೆ ಮಾಡಿ ಸಮಸ್ಯೆ ಪರಿಹರಿಸಿಕೊಳ್ಳಬಹುದು ಎಂದು ಸೈಕಿಯಾಟ್ರಿಕ್ ಮನೋವೈಜ್ಞಾನಿಕ ಸಾಮಾಜಿಕ ಕಾರ್ಯಕರ್ತ ಸಂತೋಷ್ ಕುಮಾರ್ ತಿಳಿಸಿದರು. ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ದಾವಣಗೆರೆ ಇವರ ವತಿಯಿಂದ ಜಗಳೂರು ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ರಾಷ್ಟ್ರೀಯ ಟೆಲಿ ಮಾನಸಿಕ ಆರೋಗ್ಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಸ್ತುತ ದಿನದಲ್ಲಿ ಮನಸ್ಸಿನಲ್ಲಿ ಕಿರಿಕಿರಿ, ಬೇಜಾರು, ವ್ಯಥೆಗೆ ಒಳಪಟ್ಟವರು, ಕೌಟುಂಬಿಕ ಸಮಸ್ಯೆಗಳು, ಆತ್ಮಹತ್ಯೆ ಆಲೋಚನೆಗಳು, ಮಾದಕ ವಸ್ತು ವ್ಯಸನದ ಸಮಸ್ಯೆಯಲ್ಲಿರುವವರು, ಸಂಬಂಧಗಳ ಸಮಸ್ಯೆಯಲ್ಲಿರುವವರು , ಜ್ಞಾಪಕ ಶಕ್ತಿ ತೊಂದರೆಯುಳ್ಳವರು, ಆರ್ಥಿಕ ಒತ್ತಡವದಲ್ಲಿರುವವರು, ತೀವ್ರತರ ಒತ್ತಡವನ್ನು ನಿರ್ವಹಿಸಲಾಗದೆ ಆತ್ಮಹತ್ಯೆ ಆಲೋಚನೆ ಮಾಡುವವರು, ಟೆಲಿಮನಸ್ ಎಂಬ ಟೋಲ್ ಫ್ರೀ ನಂಬರ್ ಗೆ 14416 ಕರೆ ಮಾಡಲು ಭಾರತ ಸರ್ಕಾರವು ಪ್ರತಿಯೊಬ್ಬ ವ್ಯಕ್ತಿಗೂ ಕೂಡ ಉಚಿತವಾಗಿ ಆಪ್ತ ಸಮಾಲೋಚನೆ ಸಲಹೆ ಸೂಚನೆಗಳು ಸಿಗಲಿ ಎಂದು ಒಂದು ಟೋಲ್ ಫ್ರೀ ನಂಬರನ್ನು ಬಿಡುಗಡೆ ಮಾಡಿದ್ದಾರೆ.
