ಉದಯವಾಹಿನಿ, ಬೆಂಗಳೂರು: ವಿಭಿನ್ನ ಟೈಟಲ್ ಹೊಂದಿರುವ ನಸಾಬ್ ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮ ಬೆಂಗಳೂರಿನ ಮಹಾರಾಣಿ ಕಾಲೇಜು ಆವರಣದ ಸ್ಕೌಟ್ಸ್ ಆಯಂಡ್ ಗೈಡ್ಸ್ ಕೊಂಡಜ್ಜಿ ಸಭಾಂಗಣದಲ್ಲಿ ಇತ್ತಿಚೆಗೆ ಬಹಳ ಅಚ್ಚುಕಟ್ಟಾಗಿ ನಡೆಯಿತು. ವ್ಯವಸ್ಥಿತವಾಗಿ ಯೋಜನೆಗೊಂಡ ಈ ಸಮಾರಂಭಕ್ಕೆ ಹಲವು ಗಣ್ಯರು ಬಂದು ಚಿತ್ರತಂಡ ಕ್ಕೆ ಶುಭಹಾರೈಸಿದ್ರು. ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರ ಆಪ್ತ ಸಹಾಯಕರಾದ ಕೆ ಕಿಶೋರ್ ಕುಮಾರ್ ಅವರ ಆತ್ಮಕಥೆಯನ್ನು ಆಧರಿಸಿ ತಯಾರಾಗುತ್ತಿರುವ ‘ನಸಾಬ್’ಚಿತ್ರಕ್ಕೆ ಶಿಜ ಅವರ ನಿರ್ದೇಶನ, ಡಾ. ರಾಗಂ ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಸಂಗೀತ ಸಂಯೋಜನೆ ಇದೆ.
ಯುವ ನಟ ಕೀರ್ತಿ ಕುಮಾರ್ ನಾಯಕನಾಗಿ ನಟಿಸಿದ್ದು ಇವರೊಂದಿಗೆ ಅಮೃತಾ,ಜಯಶ್ರೀ, ಹೇಮಂತ್, ಪದ್ಮವಾಸಂತಿ, ವಿಜಯಕಾಶಿ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಸಮಾರಂಭದಲ್ಲಿ ಶ್ರೀಜಂಬುನಾಥ ಸ್ವಾಮಿ ಎಸ್. ಮಳಿಮಠ, ಬಂಜಾರ ಶಕ್ತಿಪೀಠದ ಶ್ರೀ ಕುಮಾರ ಮಹಾರಾಜ ಸ್ವಾಮೀಜಿ, ಮಾಜಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ವಿಷ್ಣುವರ್ಧನ್ ಅಭಿಮಾನಿಗಳ ಸಂಘದ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್, ಸೇರಿದಂತೆ ವಿವಿಧ ಕ್ಷೇತ್ರಗಳ ಹಲವು ಗಣ್ಯರು ಹಾಜರಿದ್ದು ‘ನಸಾಬ್’ ಚಿತ್ರದ ಟೈಟಲ್ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.
