ಉದಯವಾಹಿನಿ, ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಬಜಪೆ ಹಾಗೂ ಸುರತ್ಕಲ್‌ನ 14 ಕಡೆ ಎನ್‌ಐಎ ದಾಳಿ ನಡೆಸಿದೆ. ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ 10 ಕಡೆ, ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ 4 ಕಡೆ ಎನ್‌ಐಎ ದಾಳಿ ಮಾಡಿದೆ. ಕೊಲೆ ಆರೋಪಿಗಳು ಹಾಗೂ ಎಸ್‌ಡಿಪಿಐ ಮುಖಂಡರ ಮನೆಗೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ 10 ಕಡೆ, ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ 4 ಕಡೆ ಎನ್‌ಐಎ ದಾಳಿ ಮಾಡಿದೆ. ಕೊಲೆ ಆರೋಪಿಗಳು ಹಾಗೂ ಎಸ್‌ಡಿಪಿಐ ಮುಖಂಡರ ಮನೆಗೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನಿಷೇಧಿತ ಸಂಘಟನೆ ಪಿಎಫ್‌ಐ ಕಾರ್ಯಕರ್ತರು ಶಾಮೀಲಾಗಿರುವ ಆರೋಪ ಕೇಳಿಬಂದಿದೆ. ಇದರಿಂದಾಗಿ ಈ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಇಲಾಖೆ ಎನ್‌ಐಎ ತನಿಖೆಗೆ ವಹಿಸಿತ್ತು.

Leave a Reply

Your email address will not be published. Required fields are marked *

error: Content is protected !!