ಉದಯವಾಹಿನಿ, ಚಿಕ್ಕಬಳ್ಳಾಪುರ: ಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿದ್ದೇ ತಡ.. ಕೆಲ ಮಹಿಳೆಯರು ಪ್ರವಾಸ, ತವರು ಮನೆ, ನೆಂಟರ ಮನೆಗಳಿಗೆ ಅಂತ ಮೈತುಂಬಾ ಚಿನ್ನಾಭರಣ ಹಾಕಿಕೊಂಡು ಬಸ್ ಹತ್ತುತ್ತಾರೆ. ಆದ್ರೆ ಅಂಥವರನ್ನೆ ಟಾರ್ಗೆಟ್ ಮಾಡಿದ್ದ ಅದೊಂದು ಕಳ್ಳಿಯರ ಗ್ಯಾಂಗ್, ತುಂಬಿದ್ದ ಬಸ್ ಹತ್ತಿ ಮಹಿಳೆಯರ ಚಿನ್ನಾಭರಣಗಳಿಗೆ ಕನ್ನ ಹಾಕ್ತಿದ್ರು. ಈಗ ಆ ಗ್ಯಾಂಗ್ ಪೊಲೀಸರ ಅತಿಥಿಯಾಗಿದೆ.
ಈ ಗ್ಯಾಂಗ್‌ನ ಕಳ್ಳಿಯರು ಬಸ್ ಹತ್ತಿದ್ರೆ ಸಾಕು ಪ್ರಯಾಣಿಕರ ಜೇಬಲ್ಲಿ ಇರೋ ದುಡ್ಡು ಕ್ಷಣ ಮಾತ್ರದಲ್ಲಿ ಮಾಯವಾಗ್ತಿತ್ತು. ಇನ್ನೂ ಮೈಮೇಲೆ ಇರೋ ಒಡವೆಗಳು ಮಂಗಮಾಯ ಆಗ್ತಿತ್ತು. ಆಕೆಯ ಹೆಸರು ತುಳಸಿ (22), ಮತ್ತಿಬ್ಬರ ಹೆಸರು ಪ್ರೇಮಾ (21), ಸೋನಿಯಾ (25). ಮೂವರೂ ಕಲಬುರಗಿ ಮೂಲದವರು. ಶಕ್ತಿ ಯೋಜನೆಯಡಿ ಮಹಿಳೆಯರು ಮುಗಿಬಿದ್ದು ಬಸ್‌ಗಳಲ್ಲಿ ಪ್ರಯಾಣ ಮಾಡ್ತಿದ್ದಂತೆ ಇವರ ಆದಾಯ ಏರಿಕೆಯಾಗಿದೆಯಂತೆ. ತುಂಬಿದ ಬಸ್‌ಗಳಲ್ಲಿ ಮಹಿಳೆಯರು ಬಸ್ ಹತ್ತುವಾಗ ಇಳಿಯುವಾಗ ಈ ಮೂವರು ಸುಂದರಿಯರು. ಮಹಿಳೆಯರ ಬ್ಯಾಗ್‌ನಲ್ಲಿದ್ದ ಹಣ, ಕತ್ತಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡ್ತಿದ್ರು.
