ಉದಯವಾಹಿನಿ, ಬೆಂಗಳೂರು: ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಪಿಜಿ ಮಾಲೀಕನನ್ನ ಬಂಧಿಸಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿ ನಡೆದಿದೆ.ಪಿಜಿ ಮಾಲೀಕ ಅಶ್ರಫ್ ಬಂಧಿತ ರೇಪ್ ಆರೋಪಿ. ವಿದ್ಯಾರ್ಥಿನಿ ಪಿಜಿ ಸೇರಿ ಕೇವಲ 10 ದಿನಗಳು ಕಳೆದಿತ್ತು. ಮೊನ್ನೆ ಆಕೆಯನ್ನ ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಹೊತ್ತೊಯ್ದು ಅತ್ಯಾಚಾರ ಎಸಗಿದ್ದಾನೆ.
ಘಟನೆ ಬಳಿಕ ಸಂತ್ರಸ್ತೆ ಸೋಲದೇವನಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅಶ್ರಫ್‌ನನ್ನ ಬಂಧಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.
