ಉದಯವಾಹಿನಿ, ಮಂಡ್ಯ: ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಹೆಚ್.ಸಿ. ಮಹದೇವಪ್ಪ, ಕೃಷ್ಣರಾಜ ಸಾಗರ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂದು ವಿವಾದಾತ್ಮ ಹೇಳಿಕೆ ನೀಡಿದ್ದಾರೆ. ಕೆಆರ್​ಎಸ್​ ಗೇಟ್​ನ ಹೆಬ್ಬಾಗಿಲಿನಲ್ಲಿ ಈಗಲೂ ಅಡಿಗಲ್ಲು ಇದ್ದು ಈ ಸತ್ಯವನ್ನು ಹೇಳಲು ಯಾರಿಗೂ ಧೈರ್ಯ ಇಲ್ಲ ಎಂದು ಹೇಳಿದರು.

ಟಿಪ್ಪು ಸುಲ್ತಾನ್ ನನ್ನು ಹೊಗಳುವ ಭರದಲ್ಲಿ ಸಚಿವರು ಮೈಸೂರು ಅರಸರ ಸಾಧನೆಯನ್ನು ಕಡೆಗಣಿಸುವ ಕೆಲಸ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಟಿಪ್ಪು ಸುಲ್ತಾನ್ ದೇವದಾಸಿ ಪದ್ಧತಿ ರದ್ದು ಮಾಡಿದರು. ಟಿಪ್ಪು ಸುಲ್ತಾನ್​ ಅವರ ಕಾಲದಲ್ಲಿ ಒಂದೇ ಒಂದು ಇಂಚು ಭೂಮಿಯನ್ನು ಉಳ್ಳವರಿಗೆ ಕೊಟ್ಟಿರಲಿಲ್ಲ. ಟಿಪ್ಪು ಸುಲ್ತಾನ್ ಭಾರತ ದೇಶಕ್ಕೆ ರೇಷ್ಮೆ ಕೃಷಿ ತಂದರು. ಮೈಸೂರಿನ ಅರಮನೆ ಇದ್ದಿದ್ದು ಶ್ರೀರಂಗಪಟ್ಟಣದಲ್ಲಿ. ಟಿಪ್ಪು ಸುಲ್ತಾನ್​ ರಣರಂಗದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ದೊಡ್ಡ ಸ್ವತಂತ್ರ ಸೇನಾನಿ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!