ಉದಯವಾಹಿನಿ, ಬೆಂಗಳೂರು:  ಹಿರಿಯ ಪತ್ರಕರ್ತರಾದ ಮುಳ್ಳಳ್ಳಿ ಸೂರಿ ಅವರು ಇಂದು ನಿಧನರಾಗಿದ್ದಾರೆ. ನಾಲ್ಕು ತಿಂಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ಬ್ರೈನ್ ಟ್ಯೂಮರ್ ಆಪರೇಶನ್ ಗೆ ಒಳಗಾಗಿದ್ದ ಅವರು ಬಳಿಕ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚೇತರಿಸಿಕೊಳ್ಳುವ ಹೊತ್ತಿನಲ್ಲಿ ಕೊನೆಯುಸಿರೆಳೆದಿದ್ದಾರೆ. ತಾಯಿನಾಡು, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಯಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಅವರು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, ಪತ್ರಕರ್ತರ ಸಹಕಾರ ಸಂಘ ಮತ್ತು ಪ್ರೆಸ್ ಕ್ಲಬ್ ನಲ್ಲಿ ಸಕ್ರಿಯವಾಗಿದ್ದರು. ಇನ್ನು ಮುಳ್ಳಳ್ಳಿ ಸೂರಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಹಿರಿಯ ಪತ್ರಕರ್ತ ಮುಳ್ಳಳ್ಳಿ ಸೂರಿ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಹಲವು ದಶಕಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿ ಸೇವೆ ಸಲ್ಲಿಸುತ್ತಿದ್ದ ಸೂರಿ ಅವರ ಅಗಲಿಕೆಯಿಂದ ನೊಂದಿರುವ ಕುಟುಂಬವರ್ಗ ಮತ್ತು ಓದುಗ ಬಳಗದ ದುಃಖದಲ್ಲಿ ನಾನೂ ಭಾಗಿ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!