ಉದಯವಾಹಿನಿ, ಬೆಂಗಳೂರು, ಸಾರಿಗೆ ನೌಕರರ ಒಕ್ಕೂಟದ ಮುಖಂಡರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನಡೆಸಿದ ಮಾತುಕತೆ ವಿಫಲವಾಗಿದೆ.ಈ ಹಿನ್ನೆಲೆಯಲ್ಲಿ ನಾಳೆ ಸಾರಿಗೆ ನೌಕರರು ಮುಷ್ಕರ ನಡೆಸಲಿದ್ದಾರೆ.ವಿಧಾನಸಭೆಯ ಅಧಿವೇಶನದ ಬಳಿಕ ವೇತನ ಪರಿಷ್ಕರಣೆ ತೀರ್ಮಾನ ಮಾಡಲಾಗುವುದು ಎಂದು ಭರವಸೆ ನೀಡಿದರು. ಆದರೆ ಒಕ್ಕೂಟದ ನಾಯಕರು ಮುಷ್ಕರ ಕೈಬಿಡುವಂತೆ ಮುಖ್ಯಮಂತ್ರಿಗಳು ಮಾಡಿದ ಮನವಿಯನ್ನು ಒಕ್ಕೂಟದ ನಾಯಕರು ತಿರಸ್ಕರಿಸಿದ್ದು ಮುಷ್ಕರ ನಡೆಸಲು ತೀರ್ಮಾನಿಸಿಸಿದ್ದಾರೆ.
1.15 ಲಕ್ಷ ಸರ್ಕಾರಿ ಸಾರಿಗೆ ನೌಕರ ಬಂದ್ ನಲ್ಲಿ ಭಾಗಿಯಾಗುವ ಸಾಧ್ಯತೆಯಿದೆ. ಹೀಗಾಗಿ ಇಂದು ರಾತ್ರಿಯಿಂದಲೇ ಬಸ್ ಸಂಚಾರ ಸ್ಥಗಿತವಾಗುವ ಸಾಧ್ಯತೆಯಿದೆ.
ರಾಜ್ಯಾದ್ಯಂತ ಸಾರಿಗೆ ನೌಕರರು ಸರ್ಕಾರದ ವಿರುದ್ಧ ಮತ್ತೆ ಸಮರ ಸಾರಿದ್ದು, ನಾಳೆಯಿಂದ (ಆಗಸ್ಟ್ 5) ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪಟ್ಟು ಹಿಡಿದಿರುವ ನೌಕರರು, ಸರ್ಕಾರದ ಮನವೊಲಿಕೆಗಳಿಗೆ ಜಗ್ಗಿಲ್ಲ. ಈ ಹಿನ್ನೆಲೆಯಲ್ಲಿ, ಮುಷ್ಕರವನ್ನು ತಪ್ಪಿಸಲು ಕೊನೆಯ ಕ್ಷಣದ ಕಸರತ್ತು ನಡೆದಿತ್ತು.ಇಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆಯನ್ನು ಸಹ ನಡೆದಿದೆ. ಆದ್ರೆ, ಸಭೆಯಲ್ಲಿ ಸಿಎಂ ಬೇಡಿಕೆ ಈಡೇರಿಕೆ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಹೀಗಾಗಿ ಸಭೆ ವಿಫಲವಾಗಿದೆ.
