ಉದಯವಾಹಿನಿ, ಗಂಗಾವತಿ: ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ ನಡೆಯುವ ಆ.15ರ ಸ್ವಾತಂತ್ರ್ಯೋತ್ಸವದ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮಕ್ಕೆ ತಾಲೂಕಿನ ಆನೆಗೊಂದಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹುಲಿಗೆಮ್ಮ ಹೊನ್ನಪ್ಪ ನಾಯಕ್ ವಿಶೇಷ ಅತಿಥಿಯಾಗಿ ಪಾಲ್ಗೊಳ್ಳಲು ಆಯ್ಕೆಯಾಗಿದ್ದಾರೆ.
ವಿವಿಧ ಮಾನದಂಡಗಳನ್ನು ಆಧರಿಸಿ ರಾಜ್ಯದಲ್ಲಿ ಕೊಡಗು, ದಕ್ಷಣ ಕನ್ನಡ, ಚಿಕ್ಕಮಂಗಳೂರು, ತುಮಕೂರು, ಬೆಳಗಾವಿ, ಕಲಬುರಗಿ ಹಾಗೂ ಕೊಪ್ಪಳ ಜಿಲ್ಲೆಯ ಕೇವಲ ಏಳು ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ಕಲ್ಯಾಣ ಕರ್ನಾಟಕದಲ್ಲಿ ಕೇವಲ ಇಬ್ಬರು ಆಯ್ಕೆಯಾಗಿದ್ದು, ಕೊಪ್ಪಳ ಜಿಲ್ಲೆಯಿಂದ ಹುಲಿಗೆಮ್ಮ ನಾಯಕ್ ಒಬ್ಬರೇ ಆಯ್ಕೆಯಾಗಿರುವುದು ವಿಶೇಷ. ಈ ಬಗ್ಗೆ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಆಯುಕ್ತಾಲಯ ಅಧಿಕೃತ ಮಾಹಿತಿ ನೀಡಿದೆ.ಮಾತ್ರ ವಿಶೇಷ ಅತಿಥಿಗಳನ್ನಾಗಿ ಆಯ್ಕೆ ಮಾಡಲಾಗಿದೆ.
ಈ ಏಳು ಜನರಿಗೆ ಇಬ್ಬರು ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಆಯ್ಕೆಯಾದ ಸದಸ್ಯರು ತಮ್ಮೊಂದಿಗೆ ಪತಿ ಅಥವಾ ಪತ್ನಿಯನ್ನು ಕರೆದೊಯ್ಯಲು ಅವಕಾಶವಿದ್ದು, ರೈಲು ಪ್ರಯಾಣ ಹಾಗೂ ದೆಹಲಿಯ ಕರ್ನಾಟಕ ಭವನದಲ್ಲಿ ಉಳಿದುಕೊಳ್ಳುವ ವಸತಿ, ಊಟ, ಉಪಹಾರದ ವೆಚ್ಚಚನ್ನು ಪಂಚಾಯಿತಿ ನಿಧಿಯಿಂದ ಭರಿಸುವಂತೆ ಸೂಚಿಸಲಾಗಿದೆ ಎಂದು ಆಯುಕ್ತಾಲಯ ಅಧಿಕೃತ ಮಾಹಿತಿ ನೀಡಿದೆ.
