
ಉದಯವಾಹಿನಿ, ಚಿಕ್ಕಮಗಳೂರು: ರೇಪ್ ಕೇಸ್‍ನಲ್ಲಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹುಟ್ಟು ಹಬ್ಬದ ಹಿನ್ನೆಲೆ, ಶೃಂಗೇರಿ ಶಾರದಾಂಬೆಗೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಶೃಂಗೇರಿಯಲ್ಲಿ ವಾಸ್ತವ್ಯ ರೇವಣ್ಣ ಹೂಡಿದ್ದ ಹೂಡಿದ್ದರು. ಶೃಂಗೇರಿ ಗುರುಗಳ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದರು. ಇಂದು (ಆ.5) ಬೆಳ್ಳಂ ಬೆಳಗ್ಗೆಯೇ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದು ಬೆಂಗಳೂರಿಗೆ ಹೊರಟಿದ್ದಾರೆ. ದೇವೇಗೌಡರ ಕುಟುಂಬ ಸುಮಾರು 50 ವರ್ಷಗಳಿಂದ ಶಾರದಾಂಬೆಯ ಭಕ್ತರಾಗಿದ್ದಾರೆ.
ಹಿಂದೆ ಸಮ್ಮಿಶ್ರ ಸರ್ಕಾರದ ಅವಧಿಯಲ್ಲೂ ಸರ್ಕಾರ ಉಳಿಸಿಕೊಳ್ಳಲು ರೇವಣ್ಣ ದೇವರ ಮೊರೆ ಹೋಗಿದ್ದರು. ಶೃಂಗೇರಿ ದೇವಾಲಯಕ್ಕೆ ಹೋಗಿ ಶಾರದೆಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಅಲ್ಲದೇ ಕೃತ್ತಿಮಿ ಶಕ್ತಿ ದೋಷ ಪರಿಹಾರಾರ್ಥ ಸುದರ್ಶನ ಹೋಮ ನಡೆಸಿದ್ದರು. ಅಲ್ಲದೇ ದೇವೇಗೌಡರು ಶೃಂಗೇರಿಯಲ್ಲಿ ಅತಿರುದ್ರ ಮಹಾಯಾಗ ನಡೆಸಿದ್ದರು. ನಂತರ ಸರ್ಕಾರಕ್ಕೆ ಸಂಚಕಾರ ಬಂದಾಗ ದೇವೇಗೌಡರು ಒಂದೊಂದು ಯಾಗ ನಡೆಸಿದ್ದರು.
