ಉದಯವಾಹಿನಿ, ಹಿರಿಯೂರು: ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಪೋಷಕರಿಗೆ ತಮ್ಮ ಮಕ್ಕಳ ಶಾಲಾ ಚಟುವಟಿಕೆಗಳಲ್ಲಿ ಭಾಗಿಯಾಗಲು ಇರುವ ಅವಕಾಶಗಳಲ್ಲಿ ಒಂದಾಗಿದೆ ಈ ಪೋಷಕರ ಸಭೆಗಳಲ್ಲಿ ಪೋಷಕರು ಭಾಗವಹಿಸುವುದರಿಂದ ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿ ತಿಳಿಯುವುದರ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಕರೊಂದಿಗೆ ಮುಕ್ತವಾಗಿ ಚರ್ಚಿಸಬಹುದಾಗಿದೆ ಅದಕ್ಕಾಗಿ ಪ್ರತಿಯೊಂದು ಮಗುವಿನ ಪೋಷಕರು ಸಭೆಗಳಲ್ಲಿ ಭಾಗವಹಿಸುವುದು ಅವಶ್ಯವಾಗಿದೆ. ಎಂದು ಹಿರಿಯೂರು ತಾಲ್ಲೂಕಿನ ಯರಬಳ್ಳಿ ಗ್ರಾಮದ ಸರ್ಕಾರಿ ಪಿಎಂ ಶಾಲೆಯ ಮುಖ್ಯ ಶಿಕ್ಷಕಿ ಎಂ.ವಿ.ಸವಿತ ಅಭಿಪ್ರಾಯ ಪಟ್ಟಿದ್ದಾರೆ
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಶಿಕ್ಷಣ ಇಲಾಖೆ ಹಿರಿಯೂರು ಸಹಯೋಗದೊಂದಿಗೆ ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಯರಬಳ್ಳಿ ವತಿಯಿಂದ ಶಾಲೆಯ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಪೋಷಕರ, ತಾಯಂದಿರ, ಶಾಲೆಯ ಹಳೆಯ ವಿಧ್ಯಾರ್ಥಿಗಳ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡುತ್ತ ಅವರು ಶಾಲಾ ಚಟುವಟಿಕೆಗಳನ್ನು ತಿಳಿದುಕೊಳ್ಳಲು ಪೋಷಕರ ಸಭೆಗಳಲ್ಲಿ ಶಾಲೆಯ ನಿಯಮಗಳು, ಪಠ್ಯೇತರ ಚಟುವಟಿಕೆಗಳು, ಮುಂಬರುವ ಕಾರ್ಯಕ್ರಮಗಳು ಮತ್ತು ಇನ್ನಿತರ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಇದರಿಂದ, ನಿಮ್ಮ ಮಗುವು ಶಾಲೆಯಲ್ಲಿ ಯಾವೆಲ್ಲ ಅವಕಾಶಗಳನ್ನು ಪಡೆಯಬಹುದು ಎಂಬುದನ್ನು ತಿಳಿದುಕೊಳ್ಳಲು ಸಹಾಯವಾಗುತ್ತದೆ.ಪೋಷಕರೊಂದಿಗೆ ಸಂಪರ್ಕ ಬೆಳೆಸಲು ಸಭೆಗಳಲ್ಲಿ ಇತರ ಮಕ್ಕಳ ಪೋಷಕರನ್ನು ಭೇಟಿ ಮಾಡಬಹುದು. ಅವರೊಂದಿಗೆ ನಿಮ್ಮ ಅನುಭವಗಳನ್ನು ಹಂಚಿಕೊಳ್ಳಬಹುದು. ನಿಮ್ಮ ಮತ್ತು ನಿಮ್ಮ ಮಗುವಿನ ಸಾಮಾಜಿಕ ಸಂಪರ್ಕವನ್ನು ವಿಸ್ತರಿಸಲು ಸಹಾಯ ಮಾಡುತ್ತದೆ.ಶಾಲೆಯ ಸುಧಾರಣೆಗೆ ಕೊಡುಗೆ ನೀಡಲು ಪೋಷಕರಾಗಿ, ಶಾಲೆಯ ಆಡಳಿತ ಮಂಡಳಿಗೆ ಕೆಲವು ಸಲಹೆಗಳನ್ನು ನೀಡುವ ಅಥವಾ ನಿಮ್ಮ ಅಭಿಪ್ರಾಯವನ್ನು ತಿಳಿಸುವ ಅವಕಾಶವಿರುತ್ತದೆ. ಶಾಲೆಯ ಸುಧಾರಣೆಗೆ ಸಹಾಯ ಮಾಡಬಹುದು ಎಂದು ತಿಳಿಸಿದರು.
ಶಾಲೆಯ ಯೋಗ ಶಿಕ್ಷಕ ರವಿ ಕೆ.ಅಂಬೇಕರ್ ಮಾತನಾಡಿ ಶಾಲೆಯ ಮಕ್ಕಳಿಗೆ ಯೋಗ ಅವಶ್ಯಕತೆ ಕುರಿತು ಮಾತನಾಡಿ ” ಇಂದಿನ ವೇಗದ ಜಗತ್ತಿನಲ್ಲಿ, ಮಕ್ಕಳು ಕೇವಲ ಶೈಕ್ಷಣಿಕ ಒತ್ತಡ ಮಾತ್ರವಲ್ಲದೆ ಸಾಮಾಜಿಕ ಮತ್ತು ಮಾನಸಿಕ ಸವಾಲುಗಳನ್ನು ಕೂಡ ಎದುರಿಸುತ್ತಿದ್ದಾರೆ. ಯೋಗವು ಕೇವಲ ವ್ಯಾಯಾಮವಲ್ಲ, ಇದು ನಮ್ಮ ಪ್ರಾಚೀನ ಸಂಸ್ಕೃತಿಯ ಅಮೂಲ್ಯ ಭಾಗವಾಗಿದೆ. ಇದು ನಮ್ಮ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಾಯಕವಾಗಲಿದೆ” ಎಂದು ತಿಳಿಸಿದರು. ಪ್ರಸ್ತುತ ವರ್ಷದಿಂದ ಯರಬಳ್ಳಿ ಶಾಲೆಯ ಮಕ್ಕಳಿಗೆ ಯೋಗ ಕಲಿಕೆ ಆರಂಭಿಸಿರುವುದು ಪೋಷಕರು ಸ್ವಾಗತಿಸುವುದರ ಜೊತೆಗೆ ಶಿಕ್ಷಕರೊಂದಿಗೆ ಪೋಷಕರು ಶಾಲಾ ಪ್ರಗತಿಯ ಬಗ್ಗೆ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ತಿಪ್ಪೇಸ್ವಾಮಿ ಟಿ. ಅಧ್ತಕ್ಷತೆ ವಹಿಸಿದ್ದ ಸಭೆಯಲ್ಲಿ ಎಸ್ ಡಿಎಂಸಿ ಉಪಾಧ್ಯಕ್ಷೆ ಸುಮಲತಾ, ಮಾರ್ಗದರ್ಶಿ ಶಿಕ್ಷಕರಾದ ಶ್ರೀಮತಿ ಶಶಿಕಲಾ, ಎಸ್ ಡಿ ಎಂ ಸಿ ಸದಸ್ಯರು, ಗ್ರಾಮದ ಮುಖಂಡರು, ಶಾಲಾ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
