ಉದಯವಾಹಿನಿ, ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ (79) ಅವರಿಂದು ನಿಧನರಾಗಿದ್ದಾರೆ. ದಿರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಲಿಕ್‌ ದೆಹಲಿಯ ಆರ್‌ಎಂಎಲ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಜೆ&ಕೆ ಮಾತ್ರವಲ್ಲದೇ ಬಿಹಾರದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದ ಮಲಿಕ್‌ ಅವರು, ಕೃಷಿ ಚಳುವಳಿ ಮತ್ತು ಭ್ರಷ್ಟಾಚಾರದ ಬಗ್ಗೆ ಅವರು ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಹೇಳುತ್ತಿದ್ದರು. ಆದ್ರೆ ಅವರಿಗೆ ಮೂತ್ರಪಿಂಡದ ಸಮಸ್ಯೆ ಇತ್ತು. ಹೀಗಾಗಿ ದೆಹಲಿಯ ಆರ್‌ಎಂಎಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ವರದಿಗಳು ತಿಳಿಸಿವೆ.

ಸತ್ಯಪಾಲ್‌ ಮಲಿಕ್‌ ಯಾರು?:ಉತ್ತರ ಪ್ರದೇಶದ ಬಾಗ್‌ಪತ್‌ನವರಾದ ಮಲಿಕ್‌ ಮೊದಲ ಬಾರಿಗೆ ಚೌಧರಿ ಚರಣ್ ಸಿಂಗ್ ಅವರ ಭಾರತೀಯ ಕ್ರಾಂತಿ ದಳದಿಂದ ವಿಧಾನಸಭೆಗೆ ಆಯ್ಕೆಯಾದರು. 1970 ರಲ್ಲಿ ಶಾಸಕರಾಗಿ ರಾಜಕೀಯ ವೃತ್ತಿಜೀವನ ಆರಂಭಿಸಿದರು. ರಾಜಕಾರಣಿಯಾಗಿ ಸುಮಾರು 50 ವರ್ಷ ಜೀವನ ಪೂರೈಸಿದರು. ಈ ಅವಧಿಯಲ್ಲಿ ಮಲಿಕ್‌ ಹಲವು ಪಕ್ಷಗಳನ್ನ ಬದಲಾಯಿಸಿದರು.
1980 ರಲ್ಲಿ, ಚರಣ್ ಸಿಂಗ್ ನೇತೃತ್ವದ ಲೋಕ ದಳದಿಂದ ರಾಜ್ಯಸಭೆಗೆ ಆಯ್ಕೆಯಾದರು. 1984 ರಲ್ಲಿ, ಅವರು ಕಾಂಗ್ರೆಸ್ ಸೇರಿದರು. 1986 ರಲ್ಲಿ ಕಾಂಗ್ರೆಸ್‌ನಿಂದ ರಾಜ್ಯಸಭೆಗೆ ಆಯ್ಕೆಯಾದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದತಿಯ ನಂತರ ಅವರ 1 ವರ್ಷದ ರಾಜ್ಯಪಾಲರ ಅಧಿಕಾರಾವಧಿ ಮುಕ್ತಾಯವಾಯಿತು.

Leave a Reply

Your email address will not be published. Required fields are marked *

error: Content is protected !!