ಉದಯವಾಹಿನಿ, ವಾಷಿಂಗ್ಟನ್: ರಷ್ಯಾದಿಂದ ಕಚ್ಚಾ ತೈಲ ಆಮದು ಮಾಡಿ ಉಕ್ರೇನ್ ವಿರುದ್ಧದ ಯುದ್ಧಕ್ಕೆ ಸಹಕಾರ ನೀಡುತ್ತಿದೆ ಎನ್ನುವ ಹೇಳಿಕೆಗೆ ಭಾರತ ತಿರುಗೇಟು ಕೊಟ್ಟಬೆನ್ನಲ್ಲೇ ಟ್ರಂಪ್ ಮತ್ತಷ್ಟು ಸುಂಕ ವಿಧಿಸುವ ಬೆದರಿಕೆ ಹಾಕಿದ್ದಾರೆ. ಭಾರತದಿಂದ ಖರೀದಿಸುವ ಎಲ್ಲ ಆಮದು ವಸ್ತುಗಳ ಮೇಲೆ ಸುಂಕ ಗಣನೀಯ ಏರಿಕೆ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.ಹೌದು. ಭಾರತ ರಷ್ಯಾದಿಂದ ದೊಡ್ಡ ಪ್ರಮಾಣದಲ್ಲಿ ಕಚ್ಚಾ ತೈಲ ಆಮದು ಮಾಡಿಕೊಳ್ಳುತ್ತಿದೆ. ಈ ಮೂಲಕ ದೊಡ್ಡ ಪ್ರಮಾಣದಲ್ಲಿ ಲಾಭ ಮಾಡಿಕೊಳ್ಳುತ್ತಿದೆ. ಭಾರತವು ದೊಡ್ಡ ಪ್ರಮಾಣದಲ್ಲಿ ರಷ್ಯಾದ ತೈಲ ಮಾತ್ರ ಖರೀದಿಸುತ್ತಿಲ್ಲ, ಖರೀದಿಸಿದ ತೈಲವನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಿ, ದೊಡ್ಡ ಪ್ರಮಾಣದ ಲಾಭ ಮಾಡಿಕೊಳ್ಳುತ್ತಿದೆ ಎಂದು ತಮ್ಮ ಸಾಮಾಜಿಕ ಜಾಲತಾಣ ‘ಟ್ರುಥ್ ಸೋಷಿಯಲ್ʼನಲ್ಲಿ ಬರೆದುಕೊಂಡಿದ್ದಾರೆ.ಅತ್ತ ರಷ್ಯಾದ ಯುದ್ಧ ಟ್ಯಾಂಕರ್‌ಗಳಿಂದ ಉಕ್ರೇನ್‌ನಲ್ಲಿ ಹಲವು ಜನ ಸಾಯುತ್ತಿದ್ದರೂ ಅವರು ಹೆದರುತ್ತಿಲ್ಲ. ಈ ಕಾರಣದಿಂದಲೇ, ಭಾರತದಿಂದ ಖರೀದಿಸುವ ಎಲ್ಲ ಸರಕುಗಳಿಗೂ ಸುಂಕವನ್ನ ಗಣನೀಯವಾಗಿ ಏರಿಕೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.ಇದಕ್ಕೆ ಪ್ರತಿಕ್ರಿಯಿಸಿರುವ ಭಾರತ, ಸುಂಕ ಹೇರುವ ಪರಿಣಾಮಗಳ ಕುರಿತು ಪರಿಶೀಲನೆ ನಡೆಸುತ್ತಿದ್ದು, ದೇಶದ ಹಿತಾಸಕ್ತಿ ಕಾಯಲು ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದೆ.
