ಉದಯವಾಹಿನಿ, ಬೆಂಗಳೂರು: ಮುಂದಿನ ನಾಲ್ಕು ವರ್ಷಗಳ ಒಳಗಾಗಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಬರ್‌ಬನ್ ರೈಲು ಸಂಪರ್ಕ ಕಲ್ಪಿಸುವ ಮೂಲಕ ನಗರದ ಕೇಂದ್ರ ಭಾಗದಂತೆಯೇ ಇತರ ಪ್ರದೇಶಗಳನ್ನು ಸಮಗ್ರ ಅಭಿವೃದ್ಧಿ ಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ದೇವನಹಳ್ಳಿಯಲ್ಲಿ ಲ್ಯಾಬ್ಸ್ ಇಂಡಿಯಾದ 41 ಎಕರೆ ವಿಸ್ತೀರ್ಣದ ಹೊಸ ಇನ್ನೋವೇಶನ್ ಪಾರ್ಕ್ ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರಿನ ಸಮತೋಲಿತ ಅಭಿವೃದ್ಧಿಗೆ ಹಾಗೂ ಹೊರ ವಲಯಗಳನ್ನು ಅಭಿವೃದ್ಧಿಗೆ ಆಧ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.
ವಿಮಾನನಿಲ್ದಾಣಕ್ಕೆ ಮೆಟ್ರೋ ರೈಲು ಸಂಪರ್ಕವನ್ನು ತ್ವರಿತಗತಿಯಲ್ಲಿ ಕೈಗೆತ್ತಿಕೊಳ್ಳಲಾಗಿದ್ದು, 2029ರ ವೇಳೆಗೆ ಸಬರ್‌ಬನ್ ರೈಲು ಸಂಪರ್ಕವನ್ನು ಒದಗಿಸಲಾಗುತ್ತಿದೆ ಎಂದಿದ್ದಾರೆ.
ರಾಜ್ಯ ಸರ್ಕಾರದ ಕ್ರಮಗಳು ಕೇವಲ ಬೆಂಗಳೂರಿಗೆ ಸೀಮಿತವಾಗಿವೆ. ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲೂ ಜಾಗತಿಕ ತಂತ್ರಜ್ಞಾನ ಕೇಂದ್ರಗಳು ಹಾಗೂ ಸಂಶೋಧನಾತಕ ಸಂಸ್ಥೆಗಳ ಅಭಿವೃದ್ಧಿಗೆ ಪೂರ್ವಕವಾಗಿವೆೆ. ವಿಶ್ವ ಬ್ಯಾಂಕಿನ 2500 ಕೋಟಿ ರೂ.ಗಳ ಬೆಂಬಲದೊಂದಿಗೆ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಜೇಷ್ಠತಾ ಕೇಂದ್ರಗಳ ಅಭಿವೃದ್ಧಿ, ಸಂಶೋಧನೆ ಮತ್ತು ಅಭಿವೃದ್ಧಿ ಸಾಮಾರ್ಥ್ಯ ವೃದ್ಧಿ ಹಾಗೂ ಕೌಶಲ್ಯ ಸುಧಾರಣೆಗೆ ಆಧ್ಯತೆ ನೀಡಲಾಗಿದೆ. ಭವಿಷ್ಯದಲ್ಲಿ ಆಧುನಿಕ ತಂತ್ರಜ್ಞಾನದೊಂದಿಗೆ ಕೈಜೋಡಿಸಿ ಕೆಲಸ ಮಾಡುವ ಮಾನವ ಸಂಪನೂಲಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದಿದ್ದಾರೆ.
