ಉದಯವಾಹಿನಿ, ಬೆಂಗಳೂರು: ಕರ್ತವ್ಯನಿರತ ಪೋಲಿಸ್ ಪೇದೆಯ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಂದ ಆರೋಪಿ ಪರವಾಗಿ ಬಿಜೆಪಿ ಶಾಸಕ ಅಭ್ಯರ್ಥಿಗಳು ಹಾಗೂ ವಿಧಾನಪರಿಷತ್ ಸದಸ್ಯರ ಪುತ್ರ, ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಇತರೆ ಬಿಜೆಪಿ ನಾಯಕರು ಮಾತನಾಡುತ್ತಿರುವುದು ಸಾರ್ವಜನಿಕ ಚರ್ಚೆಯ ವಿಷಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು ಹಿಂದಿನ ಬಿಜೆಪಿ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿತ್ತು. ರೌಡಿಶೀಟರ್‌ಗಳು ಪೊಲೀಸ್ ಅಧಿಕಾರಗಳ ಬರ್ತಡೇ ಪಾರ್ಟಿ ಆಯೋಜನೆಯ ಉಸ್ತುವಾರಿ ನೋಡಿಕೊಳ್ಳುವಂತಹ ಹೀನಾಯ ಸ್ಥಿತಿ ಬಂದೊದಗಿತ್ತು ಎಂದಿದ್ದಾರೆ.
