ಉದಯವಾಹಿನಿ, ಬೆಂಗಳೂರು: ನನಗೆ ಮಗಳಿದ್ದಾಳೆ. ಹೈಕೋರ್ಟ್‌ ನೀಡಿದ ಜಾಮೀನು ರದ್ದು ಮಾಡಬೇಡಿ ಎಂದು ಸುಪ್ರೀಂ ಕೋರ್ಟ್‌ಗೆ ಪವಿತ್ರಾ ಗೌಡ ಮನವಿ ಮಾಡಿದ್ದಾರೆ.ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಸೇರಿ 7 ಆರೋಪಿಗಳಿಗೆ ಹೈಕೋರ್ಟ್‌ ನೀಡಿದ ಜಾಮೀನನ್ನು ರದ್ದು ಮಾಡುವಂತೆ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್​ಗೆ ಮನವಿ ಮಾಡಿದ್ದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಈಗ ತೀರ್ಪನ್ನು ಕಾಯ್ದಿರಿಸಿದೆ.

ಜುಲೈ 24 ರಂದು ನಡೆದ ಕೊನೆಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ, ನ್ಯಾಯಮೂರ್ತಿ ಆರ್. ಮಹದೇವನ್ ಅವರಿದ್ದ ಪೀಠ ನಿಮ್ಮ ವಾದ-ಪ್ರತಿವಾದವನ್ನು ಮೂರು ಪುಟಗಳಲ್ಲಿ ಸಂಕ್ಷಿಪ್ತವಾಗಿ ಒಂದು ವಾರದಲ್ಲಿ ತಿಳಿಸಿ ಎಂದು ಸೂಚಿಸಿದ್ದರು. ಅದರಂತೆ ಪವಿತ್ರಾ ಗೌಡ, ದರ್ಶನ್‌ ಮತ್ತು ಬೆಂಗಳೂರು ಪೊಲೀಸರ ಪರ ವಕೀಲರು ಲಿಖಿತ ರೂಪದಲ್ಲಿ ವಾದವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!