ಉದಯವಾಹಿನಿ, ನವದೆಹಲಿ: ಒಡಿಶಾದ ರೂರ್ಕೆಲಾ ಉಕ್ಕು ಸ್ಥಾವರದ ಅಭಿವೃದ್ಧಿ, ಉಕ್ಕು ಕ್ಷೇತ್ರದಲ್ಲಿ ಹೆಚ್ಚು ಉದ್ಯೋಗವಕಾಶ ಸೃಷ್ಟಿ ಸೇರಿದಂತೆ ಹಲವಾರು ಮಹತ್ವದ ವಿಷಯಗಳ ಬಗ್ಗೆ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಹಜಿ ಅವರು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್‌ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ನವದೆಹಲಿಯ ತಮ್ಮ ನಿವಾಸಕ್ಕೆ ಆಗಮಿಸಿದ ಒಡಿಶಾ ಮುಖ್ಯಮಂತ್ರಿಗಳನ್ನು ಆತ್ಮೀಯವಾಗಿ ಬರ ಮಾಡಿಕೊಂಡ ಕೇಂದ್ರ ಸಚಿವರು, ಆ ರಾಜ್ಯದ ಉಕ್ಕು ಕ್ಷೇತ್ರದ ಆಮೂಲಾಗ್ರ ಅಭಿವೃದ್ಧಿ ಮತ್ತು ವಿವಿಧ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದರು.ವಿಕಸಿತ ಒಡಿಶಾ ಕಾರ್ಯಕ್ರಮದ ಅಡಿಯಲ್ಲಿ ರಾಜ್ಯದ ಅಭಿವೃದ್ಧಿಗೆ ಉಕ್ಕು ಕ್ಷೇತ್ರ ಅತಿದೊಡ್ಡ ಕೊಡುಗೆ ನೀಡುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಸಹಕಾರ ಅತ್ಯಗತ್ಯವಾಗಿದೆ ಎಂದು ಮಾಹಜಿ ಅವರು ಕೋರಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು, ಉಕ್ಕು ಉತ್ಪಾದನೆಯಲ್ಲಿ ಒಡಿಶಾ ಮಹತ್ವದ ಕೊಡುಗೆ ನೀಡುತ್ತಿದೆ. ಈಗಾಗಲೇ ಭಾರತೀಯ ಉಕ್ಕು ಪ್ರಾಧಿಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರೂರ್ಕೆಲಾ ಉಕ್ಕು ಸ್ಥಾವರ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಅದರಲ್ಲಿ ಉತ್ಪಾದನೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಇನ್ನೂ ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಸಲು ಬದ್ಧರಾಗಿದ್ದೇವೆ. ರಾಜ್ಯದ ಅಭಿವೃದ್ಧಿಗೆ ಪೂರಕವಾಗಿ ಕೇಂದ್ರವು ಸದಾ ಸಹಕಾರ ನೀಡುತ್ತದೆ ಎಂದು ಭರವಸೆ ನೀಡಿದರು.

Leave a Reply

Your email address will not be published. Required fields are marked *

error: Content is protected !!