ಉದಯವಾಹಿನಿ, ಬಾಗಲಕೋಟೆ: ಪಿಯುಸಿಯಲ್ಲಿ ಉತ್ತಮ ಅಂಕಗಳಿಸಿದ್ರೂ ಪದವಿ ಪ್ರವೇಶಾತಿಗೆ ಹಣವಿಲ್ಲದೇ ಪರದಾಡುತ್ತಿದ್ದ ವಿದ್ಯಾರ್ಥಿನಿಗೆ ಟೀಂ ಇಂಡಿಯಾ ಆಟಗಾರ ರಿಷಭ್‌ ಪಂತ್ ಆರ್ಥಿಕ ನೆರವು ನೀಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.ಬಾಗಲಕೋಟೆ ತಾಲೂಕಿನ ಬೀಳಗಿ ತಾಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ್ ಎಂಬ ವಿದ್ಯಾರ್ಥಿನಿ ಪಿಯುಸಿಯಲ್ಲಿ 83% ಅಂಕ ಗಳಿಸಿದ್ದಳು. ಉನ್ನತ ಶಿಕ್ಷಣ ಪಡೆಯಬೇಕು ಎಂದು ಕನಸು ಕಂಡಿದ್ದ ಆಕೆಗೆ ಬಡತನ ಹಾಗೂ ಆರ್ಥಿಕ ತೊಂದರೆ ಕಾಡ ತೊಡಗಿತ್ತು.ತಂದೆ ತೀರ್ಥಯ್ಯ ಗ್ರಾಮದಲ್ಲಿ ಚಿಕ್ಕದಾದ ಚಹಾದ ಅಂಗಡಿ ನಡೆಸುತ್ತಿದ್ದು, ಅದರಿಂದ ಬಂದ ಹಣದಲ್ಲಿ ಕುಟುಂಬ ನಡೆಸುವುದೇ ಕಷ್ಟವಾಗಿತ್ತು. ಇಂತಹ ಕಿತ್ತು ತಿನ್ನುವ ಬಡತನದಲ್ಲಿ ಮಗಳಿಗೆ ಶಿಕ್ಷಣ ಕೊಡಿಸೋದು ಅವ್ರಿಗೆ ಗಗನ ಕುಸುಮವಾಗಿತ್ತು. ಮಗಳು ಕಲಿಕೆಗೆ ಪರದಾಡುತ್ತಿದ್ದ ಈ ಸಂದರ್ಭದಲ್ಲಿ ಗ್ರಾಮದವರಾದ ಗುತ್ತಿಗೆದಾರ ಅನಿಲ್ ಹುಣಶಿಕಟ್ಟಿ ಅವರನ್ನು ಜಮಖಂಡಿ ಬಿಎಲ್‌ಡಿಇ ಸಂಸ್ಥೆಯ ಕಾಲೇಜಿನಲ್ಲಿ ಬಿಸಿಎಗೆ ಸೀಟ್ ಕೊಡಿಸುವಂತೆ ಕೋರಿಕೊಂಡಿದ್ದರು. ಅವರು ಸೀಟ್ ಕೊಡಿಸುವ ಜೊತೆಗೆ ಆರ್ಥಿಕ ನೆರವು ಒದಗಿಸುವುದಕ್ಕೂ ಪ್ರಯತ್ನಿಸುವ ಭರವಸೆ ನೀಡಿದ್ದರು.

Leave a Reply

Your email address will not be published. Required fields are marked *

error: Content is protected !!