ಉದಯವಾಹಿನಿ, ನವದೆಹಲಿ: ತಮ್ಮ ವಿರುದ್ಧದ ಆತಂರಿಕ ತನಿಖೆ ವರದಿಯನ್ನು ಪ್ರಶ್ನಿಸಿ ನ್ಯಾಯಮೂರ್ತಿ ಯಶವಂತ್ ವರ್ಮಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ. ಭೂಗತ ಕಲ್ಲಿದ್ದಲು ಅನಿಲೀಕರಣ ಮತ್ತು ಆಧುನಿಕ ಕೈಗಾರಿಕಾ ಮೂಲಸೌಕರ್ಯಗಳ ಸೃಷ್ಟಿಯಲ್ಲಿನ ಅವಕಾಶಗಳ ಬಗ್ಗೆ ಚರ್ಚಿಸಲಾಯಿತು.ನ್ಯಾ.ದೀಪಂಕರ್ ದತ್ತ ಮತ್ತು ಎ.ಜಿ.ಮಸಿಹ್ ಅವರ ಪೀಠವು ಆಂತರಿಕ ಸಮಿತಿಯ ರಚನೆ ಮತ್ತು ವಿಚಾರಣಾ ಕಾರ್ಯವಿಧಾನವು ಕಾನೂನುಬಾಹಿರವಲ್ಲ ಎಂದು ಅಭಿಪ್ರಾಯಪಟ್ಟಿದೆ. ನಗದು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಹುದ್ದೆಯಿಂದ ತೆಗೆದುಹಾಕುವಂತೆ ಶಿಫಾರಸು ಮಾಡಿದ ಭಾರತದ ನಿವೃತ್ತ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ನೇತೃತ್ವದ ಸಮಿತಿಯ ಶಿಫಾರಸನ್ನು ಪ್ರಶ್ನಿಸಿ ವರ್ಮಾ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಈ ಬಗ್ಗೆ ಇಂದು ತೀರ್ಪು ನೀಡಿದ ಕೋರ್ಟ್, ಈ ಪ್ರಕರಣದಲ್ಲಿ ಆಗಿನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ ಪತ್ರವು ಸಂವಿಧಾನಬಾಹಿರವಲ್ಲ ಎಂದು ಒಪ್ಪಿಕೊಂಡಿದೆ. ನ್ಯಾಯಾಲಯವು ಆಂತರಿಕ ತನಿಖಾ ಪ್ರಕ್ರಿಯೆಯನ್ನು ನಿಯಮಗಳ ಪ್ರಕಾರವೇ ಮಾಡಲಾಗಿದೆ ಎಂದು ಹೇಳಿದೆ.
