ಉದಯವಾಹಿನಿ, ನವದೆಹಲಿ: ಭಾರತದ ಆಮದುಗಳ ಮೇಲೆ 50% ಸುಂಕ ವಿಧಿಸಿದ ಬೆನ್ನಲ್ಲೇ ಭಾರತ ತಿರುಗೇಟು ನೀಡಿದೆ. ಅಮೆರಿಕದಿಂದ ಹೊಸ ಶಸ್ತ್ರಾಸ್ತ್ರಗಳು ಹಾಗೂ ವಿಮಾನಗಳನ್ನು ಖರೀದಿಸುವ ಯೋಜನೆಯನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಕೆಲ ಶಸ್ತ್ರಾಸ್ತ್ರಗಳನ್ನು ಖರೀಸುವ ಒಪ್ಪಂದಗಳಿಗಾಗಿ ಮುಂದಿನ ವಾರಗಳಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರನ್ನು ವಾಷಿಂಗ್ಟನ್‌ಗೆ ಕಳುಹಿಸುವ ಯೋಜನೆ ಇತ್ತು. ಆದ್ರೆ ಟ್ರಂಪ್‌ ಸುಂಕ ಏರಿಕೆ ಬೆನ್ನಲ್ಲೇ ಪ್ರವಾಸವನ್ನ ಮೊಟಕುಗೊಳಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. ಆದ್ರೆ ಕೆಲ ಉನ್ನತ ಮೂಲಗಳು ರಕ್ಷಣಾ ಒಪ್ಪಂದಗಳನ್ನ ರದ್ದುಗೊಳಿಸುವ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ, ಒಪ್ಪಂದಗಳು, ಶಸ್ತ್ರಾಸ್ತ್ರ ಸರಬರಾಜು ಮುಂದುವರಿಯುತ್ತದೆ ಎಂದು ತಿಳಿಸಿವೆ.
ಜನರಲ್ ಡೈನಾಮಿಕ್ಸ್ ಲ್ಯಾಂಡ್ ಸಿಸ್ಟಮ್ಸ್ ತಯಾರಿಸಿದ ಸ್ಟ್ರೈಕರ್ ಯುದ್ಧ ಟ್ಯಾಂಕರ್‌ ಸೇರಿದಂತೆ ಹಲವು ರಕ್ಷಣಾ ಉತ್ಪನ್ನಗಳ ಖರೀದಿಗೆ ಭಾರತ ಆಸಕ್ತಿ ತೋರಿತ್ತು.

P-8I ವಿಮಾನ ಖರೀದಿಸಲ್ಲ;ಇದಕ್ಕೂ ಮುನ್ನವೇ ಬೋಯಿಂಗ್‌ P-8I ವಿಮಾನವನ್ನು ಖರೀದಿಸದೇ ಇರಲು ನಿರ್ಧರಿಸಿದೆ ಎಂದು ವರದಿಯಾಗಿತ್ತು. 6 ಪಿ-81 ವಿಮಾನ ಖರೀದಿಗೆ ಭಾರತ ಮುಂದಾಗಿತ್ತು. ಆದರೆ ಈಗ ಕಡಲಿನಲ್ಲಿ ಗಸ್ತು ಕಾಯುವ ಈ ವಿಮಾನ ಖರೀದಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿದೆ ಎಂದು ತಿಳಿದುಬಂದಿದೆ. 2009 ರಲ್ಲಿ ಭಾರತ 8 ವಿಮಾನ ಖರೀದಿಗೆ 2.2 ಬಿಲಿಯನ್ ಡಾಲರ್‌ ಒಪ್ಪಂದ ಮಾಡಿಕೊಂಡಿತ್ತು. 2016 ರಲ್ಲಿ 4 ವಿಮಾನ ಖರೀದಿಸಿತ್ತು. ಭಾರತದ ಸಮುದ್ರದ ಮೇಲೆ ನಿಗಾ ಇಡಲು ಭಾರತೀಯ ನೌಕಾ ಸೇನೆಗೆ ಒಟ್ಟು 18 ಪಿ-81 ವಿಮಾನಗಳ ಅಗತ್ಯವಿದೆ.

Leave a Reply

Your email address will not be published. Required fields are marked *

error: Content is protected !!