ಉದಯವಾಹಿನಿ, ಬೆಂಗಳೂರು: ಕರ್ನಾಟಕದ ಕೆಲವು ಕಾಂಗ್ರೆಸ್‌‍ ಮುಖಂಡರು ಕೊಟ್ಟಿರುವುದನ್ನೇ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ದಾಖಲೆ ಎಂದುಕೊಂಡಿದ್ದಾರೆ. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್‌ ಗಾಂಧಿ ಏನೋ ಕಡಿದು ಗುಡ್ಡೆ ಹಾಕಿದವರಂತೆ ಮಾತನಾಡುತ್ತಿದ್ದಾರೆ. ಈಗಾಗಲೇ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ. ಅವರು ಎತ್ತಿರುವ ಪ್ರಶ್ನೆಗಳಿಗೆ ಏಕೆ ಉತ್ತರಿಸಿಲ್ಲ ಎಂದು ಪ್ರಶ್ನಿಸಿದರು.ರಾಹುಲ್‌ ಗಾಂಧಿ ಪ್ರತಿಪಕ್ಷದ ನಾಯಕರು. ಅವರಿಗೆ ಅವರದೇ ಆದ ಜವಾಬ್ದಾರಿ ಇದೆ. ಬರೆದುಕೊಟ್ಟಿದ್ದನ್ನು ಮೂರ್ಖರಂತೆ ಓದಿ ಅಪಹಾಸ್ಯಕ್ಕೆ ಗುರಿಯಾಗಬಾರದು. ಮತಗಳ್ಳತನ ನಡೆದಿದ್ದರೆ ಈವರೆಗೂ ಆಯೋಗಕ್ಕಾಗಲಿ ಇಲ್ಲವೇ ನ್ಯಾಯಾಲಯದಲ್ಲಿ ಏಕೆ ಪ್ರಶ್ನೆ ಮಾಡಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.
ನಿನ್ನೆ ದಿನ ರಾಹುಲ್‌ ಗಾಂಧಿ ಅವರು ದೆಹಲಿಯಲ್ಲಿ ಕರ್ನಾಟಕದಲ್ಲಿ ಸಹ ಬಹಳಷ್ಟು ಚುನಾವಣೆಯಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ. ನಕಲಿ ಮತದಾರರು ಸೇರಿದ್ದಾರೆ ಅಂತ ಹೇಳಿದ್ದಾರೆ. ರಾಹುಲ್‌ ಗಾಂಧಿ ಹೇಳಿಕೆ ನಂತರ ಕಾಂಗ್ರೆಸ್‌‍ ಹಿರಿಯ ನಾಯಕರು ಮೂರ್ಖರಂತೆ ಪ್ರಧಾನಿ ರಾಜೀನಾಮೆ ಕೇಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದೆ.ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪ ಮಾಡಿದ್ದಾರೆ. ಅದರ ಬಗ್ಗೆ ಅರವಿಂದ ಲಿಂಬಾವಳಿ ಅವರು ಮಾತನಾಡುತ್ತಾರೆ.

Leave a Reply

Your email address will not be published. Required fields are marked *

error: Content is protected !!