ಉದಯವಾಹಿನಿ,ಹಿರಿಯೂರು:  ತಾಲ್ಲೂಕಿನ ಕಸ್ತೂರಿ ರಂಗಪ್ಪನಹಳ್ಳಿ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಎರಡು ಲಾರಿಗಳ ನಡುವೆ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ 9 ಹಸುಗಳು ಮೃತಪಟ್ಟಿವೆ. ಮಹಾರಾಷ್ಟ್ರದಿಂದ ಕೋಲಾರಕ್ಕೆ ಹಸುಗಳನ್ನು ಸಾಗಿಸಲಾಗುತ್ತಿತ್ತು. ಹಸುಗಳನ್ನು ತುಂಬಿದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಆರಂಭದಲ್ಲಿ ಏಳು ಹಸುಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದವು. ಬಳಿಕ ಮತ್ತೆ ಎರಡು ಹಸು ಸಾವನ್ನಪ್ಪಿವೆ ಎಂದು ಗ್ರಾಮಾಂತರ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!