ಉದಯವಾಹಿನಿ, ವಾಷಿಂಗ್ಟನ್: ಉಕ್ರೇನ್‌ನಲ್ಲಿ ಶಾಂತಿ ಸ್ಥಾಪಿಸುವ ಸಂಬಂಧ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.ಮುಂದಿನ ಒಂದು ವಾರದೊಳಗೆ ಅಲಾಸ್ಕಾದಲ್ಲಿ ಪುಟಿನ್ ಭೇಟಿಯಾಗುವುದಾಗಿ ಟ್ರಂಪ್ ತಿಳಿಸಿದ್ದಾರೆ. ವಶಪಡಿಸಿಕೊಂಡಿರುವ ತಮ್ಮ ತಮ್ಮ ಪ್ರದೇಶಗಳನ್ನು ಮರಳಿ ಪಡೆಯುವ ಸಂಬಂಧ ರಷ್ಯಾ ಮತ್ತು ಉಕ್ರೇನ್ ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಮೆರಿಕಾ ಸಂಯುಕ್ತ ಸಂಸ್ಥಾನದ ಅಧ್ಯಕ್ಷನಾಗಿ ನಾನು ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡುವಿನ ಬಹುನಿರೀಕ್ಷಿತ ಸಭೆಯು ಆ.15 ರಂದು ಅಲಾಸ್ಕಾ ರಾಜ್ಯದ ಗ್ರೇಟ್ ಸ್ಟೇಟ್‌ನಲ್ಲಿ ನಡೆಯಲಿದೆ ಎಂದು ಟ್ರಂಪ್ ತಮ್ಮ ಟ್ರೂತ್ ಸೋಶಿಯಲ್ ಸೈಟ್‌ನಲ್ಲಿ ಹೇಳಿದ್ದಾರೆ.ಉಕ್ರೇನಿಯನ್ ಬಿಕ್ಕಟ್ಟಿನ ದೀರ್ಘಾವಧಿಯ ಶಾಂತಿಯುತ ಇತ್ಯರ್ಥವನ್ನು ಸಾಧಿಸುವ ಸಂಬಂಧ ಚರ್ಚಿಸಲು ರಷ್ಯಾ ಅಧ್ಯಕ್ಷರು ಗಮನಹರಿಸಲಿದ್ದಾರೆಂದು ಕ್ರೆಮ್ಲಿನ್ ಸಹಾಯಕ ಯೂರಿ ಉಷಕೋವ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಫೆಬ್ರವರಿ 2022 ರಲ್ಲಿ ಉಕ್ರೇನ್ ಮೇಲೆ ರಷ್ಯಾ ಯುದ್ಧವನ್ನು ಪ್ರಾರಂಭಿಸಿತು. ಯುದ್ಧದಲ್ಲಿ ನೂರಾರು ಮಂದಿ ಸಾವನ್ನಪ್ಪಿದ್ದಾರೆ. ಲಕ್ಷಾಂತರ ಜನರು ತಮ್ಮ ಮನೆಗಳನ್ನು ಬಿಟ್ಟು ಬೇರೆ ಕಡೆ ವಲಸೆ ಹೋಗಿದ್ದಾರೆ.
ಟ್ರಂಪ್ ಅಧಿಕಾರಕ್ಕೆ ಬಂದಾಗಿನಿಂದ, ಉಕ್ರೇನ್‌ನಲ್ಲಿ ಶಾಂತಿ ಸ್ಥಾಪನೆಗೆ ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ. ಅವರೊಂದಿಗೆ ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದಕ್ಕೆ ಮುಂಚಿತವಾಗಿ ಪುಟಿನ್, ಚೀನಾ ಮತ್ತು ಭಾರತದ ನಾಯಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.
