ಉದಯವಾಹಿನಿ, ರಾತ್ರೋ ರಾತ್ರಿ ನಟ ಡಾ. ವಿಷ್ಣುವರ್ಧನ್ ಸಮಾಧಿಯನ್ನ ತೆರವುಗೊಳಿಸಿರೋದ್ರಿಂದ ಅಭಿಮಾನಿಗಳ ಆಕ್ರೋಶ ಕಟ್ಟೆಯೊಡೆದಿದೆ. ವಿಷ್ಣು ಸಮಾಧಿ ಜಾಗವನ್ನ ಉಳಿಸಿಕೊಳ್ಳಲು ಅಭಿಮಾನಿಗಳು ಹೋರಾಟ ನಡೆಸುತ್ತಿದ್ದಾರೆ. ಅಭಿಮಾನಿಗಳ ಹೋರಾಟಕ್ಕೆ ಈಗ ನಟ ಕಿಚ್ಚ ಸುದೀಪ್ ಕೂಡ ಕೈಜೋಡಿಸಿದ್ದಾರೆ.ಎಕ್ಸ್ ಖಾತೆಯಲ್ಲಿ ಸುದೀರ್ಘ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಕಿಚ್ಚ ಸುದೀಪ್, ನಾವು ನಂಬಿಕೆಯಿಟ್ಟಂತಹ ದೇವಸ್ಥಾನ ಒಡೆದಾಗ ಎಷ್ಟು ನೋವಾಗುತ್ತದೋ ಅಷ್ಟೇ ನೋವು ಸಂಕಟ ನನಗಾಗಿದೆ. ವಿಷ್ಣು ಸ್ಮಾರಕ ಉಳಿಸಿಕೊಳ್ಳಲು ಸಾಕಷ್ಟು ಹೋರಾಟ ಮಾಡಿದ್ದೆವು. ಸಂಬಂಧ ಪಟ್ಟ ಮಂತ್ರಿಗಳಿಗೆ ಹೇಳಿದೆವು. ಅದಕ್ಕೆ ಹಣಕಾಸು ಬೇಕಾ? ಮತ್ತೇನಾದರೂ ಬೇಕಾ..? ಎಲ್ಲದಕ್ಕೂ ನಾವು ಸಿದ್ಧರಿದ್ದೀವಿ ಅಂತ ನಾನೇ ಸ್ವತಃ ಹೇಳಿದ್ದೆ. ಆದರೂ ಸರ್ಕಾರ ಇದರ ಬಗ್ಗೆ ಗಮನ ತೆಗೆದುಕೊಳ್ಳಲಿಲ್ಲ. ಆ ಭೂಮಿ ಖರೀದಿ ಮಾಡಿರುವವರಲ್ಲಿ ನನ್ನದೊಂದು ಮನವಿ-ನಿಮಗೆ ಏನು ಹಣಕಾಸು ಬೇಕೋ, ಅದನ್ನು ಕೊಡಲು ನಾನು ಮತ್ತು ನನ್ನಂತಹ ಲಕ್ಷಾಂತರ ಜನರು ಮುಂದೆ ಬರುತ್ತೇವೆ. ನಾನೇ ಮುಂದೆ ನಿಂತು ಅದನ್ನು ಮತ್ತೆ ಒಂದು ಸ್ಮಾರಕವಾಗಿ ಮರುಸ್ಥಾಪನೆ ಮಾಡುವುದಕ್ಕೆ ಮುಂದಾಗಿತ್ತೇನೆ. ಅದಕ್ಕೆ ಒಂದು ಅವಕಾಶ ಮಾಡಿಕೊಡಿ ಅಂತ ಮನವಿ ಮಾಡಿದ್ದಾರೆ.
ಸುದೀಪ್ ಎಕ್ಸ್ ಪೋಸ್ಟ್‌ನಲ್ಲಿ ಏನಿದೆ?
ಸಾಹಸ ಸಿಂಹ ವಿಷ್ಣುವರ್ಧನ್ ಅಂದ್ರೆ ಅದು ಎಂದೂ ಮುಗಿಯದ ಒಂದು ಅಭಿಮಾನ, ಗೌರವ. ಮೊನ್ನೆ ರಾತ್ರಿ, ಅವರ ಸ್ಮಾರಕವನ್ನ ಒಡೆದು ಹಾಕಿರುವುದು, ನಾವು ವರ್ಷಾನುಗಟ್ಟಲೆ ಇಂದ ನಂಬಿ, ಮೊರೆ ಹೋದಂತಹ ಒಂದು ದೇವರ ದೇವಸ್ಥಾನವನ್ನು ಒಡೆದು ಹಾಕಿದಾಗ ಎಷ್ಟು ನೋವು ಆಗುತ್ತದೋ, ಅಷ್ಟೇ ನೋವು ಮತ್ತು ಸಂಕಟ ನನಗಾಗಿದೆ. ಇದು ಹೈಕೋರ್ಟ್ ಆದೇಶ, ನ್ಯಾಯಾಲಯದ ಆದೇಶ ಅಂತಾರೆ. ಆದ್ರೆ, ಸರ್ಕಾರಗಳ ಮುಖಾಂತರ, ಸರ್ಕಾರದಲ್ಲಿ ಇರುವ ಮಂತ್ರಿಗಳ ಮುಖಾಂತರ, ವಿಷ್ಣು ಸ್ಮಾರಕವನ್ನ ಉಳಿಸಿಕೊಳ್ಳುವುದಕ್ಕೆ ಏನೇನು ಕ್ರಮ ತೆಗೆದುಕೊಳ್ಳಬೇಕು ಅನ್ನುವುದನ್ನ ನಾವು ತುಂಬಾ ಹೋರಾಟ ಮಾಡಿದೆವು. ಸಂಬಂಧ ಪಟ್ಟ ಮಂತ್ರಿಗಳಿಗೆ ಹೇಳಿದೆವು. ಅದಕ್ಕೆ ಹಣಕಾಸು ಬೇಕಾ? ಮತ್ತೇನಾದರೂ ಬೇಕಾ? ಎಲ್ಲದಕ್ಕೂ ನಾವು ಸಿದ್ಧರಿದ್ದೀವಿ ಅಂತ ನಾನೇ ಸ್ವತಃ ಹೇಳಿದ್ದೆ. ಆದರೂ ಸರ್ಕಾರ ಇದರ ಬಗ್ಗೆ ಗಮನ ತೆಗೆದುಕೊಳ್ಳಲಿಲ್ಲವೋ, ಅಥವಾ ನ್ಯಾಯಾಲಯಕ್ಕೆ ಸಮಾಧಿ ಮಾಡದೆ, ಭೂಮಿಯಲ್ಲಿ ಹೂಳದೆ, ಚಿತೆ ಇಟ್ಟ ಕಡೆ ಸ್ಮಾರಕ ಅಲ್ಲ, ಆಗಲೇ ಮೈಸೂರಿನಲ್ಲಿ ಒಂದು ಸ್ಮಾರಕ ಇದೆ. ಅದನ್ನೇ ಅಧಿಕೃತ ಸ್ಮಾರಕವಾಗಿ ಅವರನ್ನ ಗೌರವಿಸುವುದಕ್ಕೆ ಇಟ್ಟುಕೊಳ್ಳಿ ಅಂತ ಮಾಹಿತಿ ನೀಡಿ ಹೈಕೋರ್ಟ್ ಕೂಡ ಆದೇಶ ಮಾಡಿದೆ.
