ಉದಯವಾಹಿನಿ, ವಾಷಿಂಗ್ಟನ್‌: ಇದೇ ಆಗಸ್ಟ್‌ 15ರಂದು ‌ಅಲಾಸ್ಕಾದಲ್ಲಿ ನಡೆಯಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ ನಡುವಿನ ಸಭೆಯನ್ನು ಭಾರತ ಸ್ವಾಗತಿಸಿದೆ. ಈ ಕುರಿತು ವಿದೇಶಾಂಗ ಸಚಿವಾಲಯದ ವಕ್ತಾರರಾದ ರಣಧೀರ್‌ ಜೈಸ್ವಾಲ್‌ ಅಧಿಕೃತ ಪ್ರಕಟಣೆಯನ್ನು ಎಕ್ಸ್‌ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ. ಆ.15ರಂದು ಅಲಾಸ್ಕಾದಲ್ಲಿ ನಿಗದಿಯಾಗಿರುವ ಅಮೆರಿಕ ಮತ್ತು ರಷ್ಯಾದ ಸಭೆಯನ್ನು ಭಾರತ ಸ್ವಾತಿಸುತ್ತದೆ. ಈ ಸಭೆಯು ಉಕ್ರೇನ್‌ನಲ್ಲಿ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸುವ ಮತ್ತು ಶಾಂತಿಯ ನಿರೀಕ್ಷೆಗಳನ್ನು ತೆರೆಯುವ ಭರವಸೆ ಹೊಂದಿದೆ. ಪ್ರಧಾನಿ ನರೇಂದ್ರ ಮೋದಿ ಹಲವಾರು ಸಂದರ್ಭಗಳಲ್ಲಿ ಹೇಳಿರುವಂತೆ, ʻಇದು ಯುದ್ಧದ ಯುಗವಲ್ಲʼ ಆದ್ದರಿಂದ, ಇಂತಹ ಈ ಪ್ರಯತ್ನಗಳನ್ನು ಬೆಂಬಲಿಸಲು ಭಾರತ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ.

ಪುಟಿನ್‌-ಟ್ರಂಪ್‌ ಹೈವೋಲ್ಟೇಜ್‌ ಮೀಟಿಂಗ್‌; ಏನೆಲ್ಲಾ ಚರ್ಚೆ..?: ಉಕ್ರೇನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಕುರಿತು ಮಾತುಕತೆ ನಡೆಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ ಅವರನ್ನು ಆಗಸ್ಟ್ 15ರಂದು ಅಲಾಸ್ಕಾದಲ್ಲಿ ಭೇಟಿ ಮಾಡುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ತಿಳಿಸಿದ್ದಾರೆ. ಈ ಬಗ್ಗೆ ತಮ್ಮ `ಟ್ರುತ್’ ಸೋಷಿಯಲ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ರಷ್ಯಾ-ಉಕ್ರೇನ್‌ ಮೂರು ವರ್ಷಗಳ ಸಂಘರ್ಷವನ್ನು ಕೊನೆಗಾಣಿಸುವ ಕದನ ವಿರಾಮ ಒಪ್ಪಂದಕ್ಕೆ ಹತ್ತಿರದಲ್ಲಿದ್ದೆವೆ ಎಂದು ಸಹ ಟ್ರಂಪ್‌ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!