ಉದಯವಾಹಿನಿ,ಹೊಸ ದೆಹಲಿ: ಬಡತನದ ರೇಖೆಗಿಂತ ಕೆಳಗಿರುವ ಜನರಿಗೆ ಒದಗಿಸಲು 1.35 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ನೀಡಲು ನಾವು ವಿನಂತಿಸಿದ್ದೇವೆ. ಆದರೆ, ಕೇಂದ್ರ ಆಹಾರ ಸಚಿವರು ಅಕ್ಕಿಯನ್ನು ನೀಡಲು ನಿರಾಕರಿಸುತ್ತಿದ್ದಾರೆ ಎಂದು ರಾಜ್ಯ ಆಹಾರ ಸಚಿವರಾದ ಕೆ. ಎಚ್ ಮುನಿಯಪ್ಪ ತಿಳಿಸಿದರು. ಶುಕ್ರವಾರ ದೆಹಲಿಯಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಜೊತೆಗಿನ ಸಭೆಯ ಬಳಿಕ ಸಚಿವರು ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿ, ಅಕ್ಕಿ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ನಿಲುವಿನ ಬಗ್ಗೆ ತಿಳಿಸಿದರು. ಕೇಂದ್ರ ಜವಳಿ, ಸಕ್ಕರೆ ಮತ್ತು ಕೃಷಿ ಸಚಿವರಾದ ಪಿಯೂಷ್ ಗೋಯಲ್ ರವರನ್ನು ಭೇಟಿ ಮಾಡಿ ರಾಜ್ಯ ಸರ್ಕಾರದ ಅನ್ಯ ಭಾಗ್ಯ ಯೋಜನೆಗೆ ಅಕ್ಕಿಯನ್ನು ನೀಡಲು ಮನವಿ ಮಾಡಿದವು. ಆದರೆ ಕೇಂದ್ರ ಸಚಿವರು 300 ಲಕ್ಷ ಟನ್ ಇತರೆ ವಿವಿಧ ಯೋಜನೆಗಳಿಗೆ ಮೀಸಲಿಡಲಾಗಿದೆ. ಆದ್ದರಿಂದ ರಾಜ್ಯಕ್ಕೆ ಅಕ್ಕಿ ನೀಡಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿರುತ್ತಾರೆ ಎಂದು ಹೇಳಿದರು.
