ಉದಯವಾಹಿನಿ, ನವದೆಹಲಿ: ಮತಕಳ್ಳತನ ವಿವಾದದ ನಡುವೆಯೇ ಬಿಹಾರದ ಉಪ ಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾಗೆ ಚುನಾವಣಾ ಆಯೋಗ ಶಾಕ್ ನೀಡಿದ್ದು, ನೋಟಿಸ್ ಜಾರಿ ಮಾಡಿದೆ. ಬಿಹಾರದ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಎರಡೆರಡು ಮತ ಗುರುತು ಪತ್ರ ಹೊಂದಿದ್ದಾರೆ ಎಂದು ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಭಾನುವಾರ ಸುದ್ದಿಗೋಷ್ಠಿ ನಡೆಸಿ ಆರೋಪ ಮಾಡಿದ ಬೆನ್ನಲ್ಲೇ ಚುನಾವಣಾ ಆಯೋಗ ಈ ಕುರಿತು ವಿವರ ಕೋರಿ ನೋಟಿಸ್ ಜಾರಿ ಮಾಡಿದೆ. ಆಗಸ್ಟ್ 14ರ ಒಳಗೆ ಲಿಖಿತ ಉತ್ತರ ನೀಡುವಂತೆ ಚುನಾವಣಾ ಆಯೋಗ ಕೇಳಿದೆ.ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ವಿಜಯ್ ಸಿನ್ಹಾ ಚುನಾವಣಾ ಆಯೋಗದ ನೋಟಿಸ್‌ಗೆ ನಾನು ಖಂಡಿತವಾಗಿಯೂ ಉತ್ತರಿಸುತ್ತೇನೆ. ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಅವರಂತೆ ಸುಮ್ಮನೆ ಗಲಾಟೆ ಮಾಡುವವನಲ್ಲ. ಸಂವಿಧಾನದ ಮೇಲೆ ನಂಬಿಕೆ ಇದೆ ಎಂದು ಹೇಳಿದ್ದಾರೆ.
