ಉದಯವಾಹಿನಿ, ನವದೆಹಲಿ: ಕೆ.ಎನ್ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ ಎಂದು ಗೊತ್ತಾಗಿದೆ. ಕಾಂಗ್ರೆಸ್‍ನಲ್ಲಿ ಸತ್ಯವಂತರಿಗೆ ಕಾಲವಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ರಾಹುಲ್ ಗಾಂಧಿ ಅವರ ಹೇಳಿಕೆಗೆ ರಾಜಣ್ಣ ಸತ್ಯವಾದ ಉತ್ತರ ಕೊಟ್ಟಿದ್ದರು. ಸತ್ಯದ ಅರಿವಾಗುತ್ತಿದೆ, ಸಹಜವಾಗಿ ಮಹಾದೇವಪುರದಲ್ಲಿ ಮತದಾರರು ಹೆಚ್ಚಾಗುತ್ತಿದ್ದಾರೆ. ಹೆಚ್ಚಿನ ಮತದಾನ ಅಲ್ಲಿ ಆಗುತ್ತಿದೆ. ಬಿಜೆಪಿಗೆ ಹೆಚ್ಚು ಮತ ಬಂದಿದೆ. ಪಿ.ಸಿ ಮೋಹನ್ ಗೆದ್ದಿದ್ದರು. ರಾಜಣ್ಣ ಇದೇ ಸತ್ಯ ಹೇಳಿದ್ದರು ಎಂದಿದ್ದಾರೆ.
ನಮ್ಮ ಸರ್ಕಾರ ಇತ್ತು, ನಮ್ಮದೇ ತಪ್ಪು ಎಂದು ರಾಜಣ್ಣ ಹೇಳಿದ್ದರು. ಜನರ ಪ್ರಶ್ನೆಯನ್ನೇ ಅವರು ಕೇಳಿದ್ದರು. ಸತ್ಯ ಹೇಳಿದ್ದಕ್ಕೆ ಅರಗಿಸಿಕೊಳ್ಳಲಾಗದೇ ರಾಜೀನಾಮೆ ಪಡೆಯಲಾಗಿದೆ. ರಾಹುಲ್ ಗಾಂಧಿ ಸತ್ಯ ಎಂದು ಹೇಳುತ್ತಾರೆ. ಯಾಕೆ ಅಫಿಡೆವಿಟ್ ಸಲ್ಲಿಕೆ ಮಾಡುತ್ತಿಲ್ಲ. ರಾಜಣ್ಣ ಅವರು ಸಿದ್ದರಾಮಯ್ಯ ಅವರಿಗೆ ಆಪ್ತರು. ಇವತ್ತು ಸಿದ್ದರಾಮಯ್ಯ ಅವರಿಗೂ ರಾಜಣ್ಣರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಈ ಮೂಲಕ ದೇಶಕ್ಕೆ ರಾಹುಲ್ ಗಾಂಧಿಯವರ ಸುಳ್ಳು ಗೊತ್ತಾಗಿದೆ ಎಂದು ಕಿಡಿಕಾರಿದ್ದಾರೆ.

Leave a Reply

Your email address will not be published. Required fields are marked *

error: Content is protected !!