ಉದಯವಾಹಿನಿ,ಬೆಂಗಳೂರು: ತಾಯಿ-ಮಗು ಸಾವಿಗೆ ಕಾರಣವಾಗಿದ್ದ ಬೆಂಗಳೂರು ಮೆಟ್ರೋ ಪಿಲ್ಲರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಿಎಂಆರ್ ಸಿಎಲ್ ಇಂಜಿನಿಯರ್ ಗಳು ಸೇರಿದಂತೆ 11 ಮಂದಿ ವಿರುದ್ಧ 1,100 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮೆಟ್ರೋ ಪಿಲ್ಲರ್ ಚೌಕಟ್ಟು ಕುಸಿದು ತಾಯಿ-ಮಗ ಮೃತಪಟ್ಟು ಬೆಂಗಳೂರಿಗರನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣಕ್ಕೆ ಸಂಬಂಧ ಪೂರ್ವ ವಿಭಾಗದ ಪೊಲೀಸರು ತನಿಖೆ ಪೂರ್ಣಗೊಳಿಸಿ ಆರೋಪಪಟ್ಟಿ ಸಲ್ಲಿಸಿದ್ದಾರೆ. ಗೋವಿಂದಪುರ ಪೊಲೀಸರು ದುರ್ಘಟನೆ ಸಂಬಂಧ ನ್ಯಾಯಾಲಯಕ್ಕೆ ೧೧೦೦ ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ನಿರ್ಮಾಣ ಕಂಪನಿಯ ಇಂಜಿನಿಯರ್ಸ್ ಹಾಗೂ ಬಿಎಂಆರ್‌ಸಿಎಲ್ ಇಂಜಿನಿಯರ್ ಗಳು ಸೇರಿ ೧೧ ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ತಜ್ಞರ ವರದಿಗಳು, ಪೊಲೀಸರ ತನಿಖೆ ಹಾಗೂ ಎಫ್‌ಎಸ್‌ಎಲ್ ರಿಪೋರ್ಟ್ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಿದ್ದರು.

ಐಐಟಿ ರಿಪೋರ್ಟ್ ಮತ್ತು ಎಫ್‌ಎಸ್‌ಎಲ್ ರಿಪೋರ್ಟ್ ಅನ್ನು ಚಾರ್ಜ್‌ಶೀಟ್‌ನಲ್ಲಿ ಸೇರಿಸಲಾಗಿದೆ. ಅಧಿಕಾರಿಗಳ ಲೋಪ ಹಾಗೂ ಪಿಲ್ಲರ್ ನಿರ್ಮಾಣ ವೇಳೆ ಕೈಗೊಂಡ ಸುರಕ್ಷತಾ ಕ್ರಮಗಳ ವೈಫಲ್ಯದ ಬಗ್ಗೆ ಉಲ್ಲೇಖಿಸಲಾಗಿದೆ. ತನಿಖೆ ವೇಳೆ ತನಿಖಾಧಿಕಾರಿಗಳು ಪ್ರಾಜೆಕ್ಟ್ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಪಿಲ್ಲರ್ ಡಿಸೈನ್ ಹೇಗೆ ಮಾಡಲಾಗಿತ್ತು ಸುರಕ್ಷತೆ ಏನೆಲ್ಲಾ ಕ್ರಮ ಕೈಗೊಳ್ಳಬೇಕಿತ್ತು ಪ್ರರಕಣದಲ್ಲಿ ಲೋಪ ಯಾರದು ಎಂಬ ಆಯಾಮದಲ್ಲಿ ಪೊಲೀಸರು ತನಿಖೆ ನಡೆಸಿದ್ದರು. ಐಐಟಿ ರಿಪೋರ್ಟ್ ಮತ್ತು ಬಳಕೆಯಾದ ಮೆಟಿರಿಯಲ್ಸ್ ಬಗ್ಗೆ ಎಫ್‌ಎಸ್‌ಎಲ್ ವರದಿ ಪಡೆದು ಘಟನೆ ನಡೆದು ಐದು ತಿಂಗಳ ಬಳಿಕ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!