ಉದಯವಾಹಿನಿ, ಹೈದರಾಬಾದ್: ತೆಲಂಗಾಣದಲ್ಲಿ ಬೆಟ್ಟಿಂಗ್ ಆಪ್ ಪ್ರಕರಣ ಸಂಚಲನ ಸೃಷ್ಟಿಸಿದೆ. ಇಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್ ನಟ ರಾಣಾ ದಗ್ಗುಬಾಟಿ ಇಡಿ ವಿಚಾರಣೆಗೆ ಹಾಜರಾಗಿದ್ದಾರೆ. ಹೈದರಾಬಾದ್‌ನ ಬಶೀರ್‌ಬಾಗ್‌ನಲ್ಲಿರುವ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.
ಇಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ನೋಟಿಸ್ ಕೊಟ್ಟಿದ್ದರು. ರಾಣಾ ವಿವಿಧ ಆನ್‌ಲೈನ್ ಬೆಟ್ಟಿಂಗ್ ಆಪ್‌ಗಳನ್ನು ಪ್ರಚಾರ ಮಾಡಿದ್ದಾರೆ ಎಂಬ ಆರೋಪಗಳ ಹಿನ್ನೆಲೆ ನೋಟೀಸ್ ನೀಡಿತ್ತು. ಈಗಾಗಲೇ ನಟರಾದ ವಿಜಯ್ ದೇವರಕೊಂಡ, ಪ್ರಕಾಶ್ ರಾಜ್ ಇಡಿ ವಿಚಾರಣೆಗೆ ಹಾಜರಾಗಿದ್ದರು. ಇನ್ನೂ ನಟಿ ಮಂಚು ಲಕ್ಷ್ಮಿ ಆಗಸ್ಟ್ 13ಕ್ಕೆ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
