ಉದಯವಾಹಿನಿ, ಮೇರು ನಟ ಡಾ.ವಿಷ್ಣುವರ್ಧನ್ ಅವರ ಸಮಾಧಿಯನ್ನ ನೆಲಸಮ ಮಾಡಿದ ಹಿನ್ನೆಲೆ ಕರ್ನಾಟಕದಾದ್ಯಂತ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಕನ್ನಡ ಚಿತ್ರರಂಗದ ನಟ, ನಟಿಯರು, ನಿರ್ದೇಶಕ ಹಾಗೂ ನಿರ್ಮಾಪಕರುಗಳು ಈ ಘಟನೆಯನ್ನ ಖಂಡಿಸಿದ್ದಾರೆ. ಧೀಮಂತ ನಾಯಕನ ವಿಚಾರದಲ್ಲಿ ಈ ವಿವಾದವನ್ನ ಅವರನ್ನ ಪ್ರೀತಿ ಮಾಡುವ ಅಭಿಮಾನಿಗಳು ತೀವ್ರವಾಗಿ ಖಂಡಿಸಿದ್ದಾರೆ. ಇದೀಗ ನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ನಟ ಉಪೇಂದ್ರ ವಿಷ್ಣುವರ್ಧನ್ ಅವರ ಮೇಲಿನ ಅಪಾರ ಪ್ರೀತಿಯನ್ನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಬಸವಣ್ಣನವರ ವಚನದ ಮೂಲಕ ಈ ಕೃತ್ಯವೆಸಗಿದವರಿಗೆ ತಿರುಗೇಟು ನೀಡಿದ್ದಾರೆ. ಜೊತೆಗೆ ಕೋಟ್ಯಂತರ ಅಭಿಮಾನಿಗಳಿಗೆ ವಿಷ್ಣುವರ್ಧನ್ ಅವರ ಸ್ಥಾನ ಎಂತದ್ದು ಎಂದು ಒಂದೇ ವಾಕ್ಯದಲ್ಲಿ ವಿವರಿಸಿದ್ದಾರೆ.

ಜಾಲತಾಣದಲ್ಲಿ ಬಸವಣ್ಣವರ ವಚನದ ಸಾಲಿನ ಮೂಲಕ ವಿಷ್ಣು ಅಮರರೆಂದು ಉಪ್ಪಿ ಬರೆದುಕೊಂಡಿದ್ದಾರೆ. ʻಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲʼ ಕೋಟಿಗೊಬ್ಬ ಸಾಹಸಸಿಂಹ ಡಾ.ವಿಷ್ಣು ಸರ್ ನನ್ನಂತಹ ಕೋಟಿ ಕೋಟಿ ಅಭಿಮಾನಿಗಳ ಹೃದಯದಲ್ಲಿ ಎಂದೆಂದಿಗೂ ಶಾಶ್ವತʼ ಅಂತ ಬರೆದುಕೊಂಡಿದ್ದಾರೆ ನಟ ಉಪೇಂದ್ರ.

Leave a Reply

Your email address will not be published. Required fields are marked *

error: Content is protected !!