ಉದಯವಾಹಿನಿ, ಬೆಂಗಳೂರು: ರಾಜಕೀಯದಲ್ಲಿ ಒಬ್ಬರ ಮೇಲೆ ಒಬ್ಬರು ಹಗೆ ಸಾಧಿಸುತ್ತಾರೆ. ನಾವು ಎಚ್ಚರಿಕೆಯಿಂದ ಇರಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ರಾಜಕೀಯದ ಪಾಠ ಹೇಳಿದ್ದಾರೆ.ರಾಜಣ್ಣರನ್ನ ಸಂಪುಟದಿಂದ ವಜಾ ಮಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಜಣ್ಣರನ್ನ ವಜಾ ಮಾಡಿರುವುದು ಹೈಕಮಾಂಡ್‌ನ ನಿರ್ಧಾರ. ಅದರ ಬಗ್ಗೆ ರಾಜಣ್ಣ ಅವರೇ ಹೇಳಿದ್ದಾರೆ. ದೆಹಲಿಗೆ ಹೋಗೋದಾಗಿ ಅವರೇ ಹೇಳಿದ್ದಾರೆ. ಆಮೇಲೆ ಪಿತೂರಿ ಅಂತ ಹೇಳಿದ್ದಾರೆ. ಹೈಕಮಾಂಡ್ ಹತ್ರ ಹೋಗಿ ಅವರು ಮಾತಾಡ್ತಾರೆ. ವಜಾದ ಬಗ್ಗೆ ವ್ಯಾಖ್ಯಾನ ಮಾಡೋಕೆ ಹೋಗಲ್ಲ ಎಂದಿದ್ದಾರೆ. ಇದನ್ನ ಸಮುದಾಯಕ್ಕೆ ಮಾಡಿದ ಮೋಸ ಅಂತ ಹೇಳಲಾಗೊಲ್ಲ. ಏನು ಅಂತ ರಾಜಣ್ಣ ಮುಂದೆ ಹೇಳ್ತೀನಿ ಅಂದಿದ್ದಾರೆ. ಮುಂದೆ ನೋಡೊಣ.ರಾಜಕೀಯದಲ್ಲಿ ಒಬ್ಬರ ಮೇಲೆ ಒಬ್ಬರಿಗೆ ಹಗೆ ಇರುತ್ತದೆ.ಸ್ವಲ್ಪ ಎಚ್ಚರಿಕೆಯಿಂದ ಇರಬೇಕು. ದೆಹಲಿಗೆ ರಾಜಣ್ಣ ಹೋಗ್ತೀನಿ ಅಂತ ಹೇಳಿದ್ದಾರೆ. ಆಗ ಎಲ್ಲವೂ ಸರಿ ಹೋಗಬಹುದು ಎಂದು ತಿಳಿಸಿದ್ದಾರೆ.
ಇದು ನಮ್ಮ ಪಕ್ಷದ ನಿರ್ಧಾರ ವಿಪಕ್ಷಗಳು ಯಾಕೆ ಮಾತಾಡ್ತಾರೆ. ಸಿಎಂ ಅವರು ಸ್ಪಷ್ಟನೆ ಕೊಡ್ತಾರೆ. ದೆಹಲಿಗೆ ಹೋದ ಮೇಲೆ ಎಲ್ಲವೂ ತಿಳಿಯಾಗಬಹುದು. ರಾಜಕೀಯದಲ್ಲಿ ಹುಷಾರಾಗಿ ಇರಬೇಕು. ಇಲ್ಲದೆ ಹೋದ್ರೆ ಹೀಗೆ ಆಗುತ್ತದೆ. ರಾಜಕೀಯದಲ್ಲಿ ಒಬ್ಬರ ಮೇಲೆ ಒಬ್ಬರಿಗೆ ಹಗೆ ಇರೋದು ಸಾಮಾನ್ಯ ಎಂದು ಹೇಳಿದ್ದಾರೆ.
ಈ ವೇಳೆ ಉತ್ತರ ಕೊಟ್ಟ ಗೃಹ ಸಚಿವ ಪರಮೇಶ್ವರ್ ತನಿಖೆ ನಡೆಯುತ್ತಿದೆ, ತನಿಖೆ ಮಧ್ಯೆ ನಾವು ಮಧ್ಯ ಪ್ರವೇಶ ಮಾಡಲ್ಲ. ತನಿಖೆ ಒಂದು ಹಂತಕ್ಕೆ ಬಂದ ನಂತರ ವರದಿ ಕೊಡ್ತಾರೆ. ವರದಿ ಕೊಟ್ಟ ನಂತರ ನಾನು ಪೂರ್ಣ ಉತ್ತರ ಕೊಡ್ತೇನೆ ಅಂದ್ರು. ಆದರೆ ಪರಮೇಶ್ವರ್ ಉತ್ತರಕ್ಕೆ ಬಿಜೆಪಿ ಸದಸ್ಯರು ಒಗ್ಗಟ್ಟಾಗಿ ವಿರೋಧ ವ್ಯಕ್ತಪಡಿಸಿ, ಸ್ಪಷ್ಟೀಕರಣ ಕೊಡಬೇಕು, ಇನ್ನೂ ಎಷ್ಟು ಗುಂಡಿ ಅಗೆಯುತ್ತೀರಾ ಹೇಳಿ? ಅಪಪ್ರಚಾರ ನಿಲ್ಲಿಸಿ, ಸುಳ್ಳುಪ್ರಚಾರ ಇದು, ಪ್ರಕರಣದ ಚರ್ಚೆಗೆ ಅವಕಾಶ ಕೊಡಿ ಅಂತ ಬಿಜೆಪಿ ಸದಸ್ಯರು ಆಗ್ರಹಿಸಿದ್ರು.
