ಉದಯವಾಹಿನಿ, ಪಾಟ್ನಾ: ಪಾಟ್ನಾದಲ್ಲಿ ವಿರೋಧ ಪಕ್ಷಗಳು ಉತ್ತಮ ಸಭೆ ನಡೆಸಿದ್ದು, ಒಟ್ಟಾಗಿ ಚುನಾವಣೆ ಎದುರಿಸಲು ನಿರ್ಧರಿಸಲಾಗಿದೆ ಎಂದು ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ನಾಯಕ ನಿತೀಶ್ ಕುಮಾರ್ ಶುಕ್ರವಾರ ಹೇಳಿದ್ದಾರೆ. ವಿರೋಧ ಪಕ್ಷಗಳ ಮೆಗಾ ಸಭೆಯನ್ನು ಕರೆದಿದ್ದ ನಿತೀಶ್ ಕುಮಾರ್, ವಿರೋಧ ಪಕ್ಷಗಳ ಮತ್ತೊಂದು ಸಭೆಯನ್ನು ಶೀಘ್ರದಲ್ಲೇ ನಡೆಸಲಾಗುವುದು ಎಂದು ಹೇಳಿದರು. ಇದು ಉತ್ತಮ ಸಭೆಯಾಗಿದ್ದು, ಚುನಾವಣೆಯಲ್ಲಿ ಒಟ್ಟಾಗಿ ಹೋರಾಡಲು ನಿರ್ಧರಿಸಲಾಗಿದೆ. ಮತ್ತೊಂದು ಸಭೆ ಶೀಘ್ರದಲ್ಲೇ ನಡೆಯಲಿದೆ” ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇತರ ವಿರೋಧ ಪಕ್ಷದ ನಾಯಕರ ಸಮ್ಮುಖದಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಕುಮಾರ್ ಹೇಳಿದರು.
