ಉದಯವಾಹಿನಿ, ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಪ್ರಕರಣ ಸಂಬಂಧ ಶಾಸಕ ಬೈರತಿ ಬಸವರಾಜ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ಪ್ರಕರಣದ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಅರುಣ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಹೊರಡಿಸಿದೆ. ಅಲ್ಲದೆ ತನಿಖೆಗೆ ಸಹಕರಿಸುವಂತೆ ಶಾಸಕರಿಗೆ ಸೂಚನೆ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಚುರುಕುಗೊಳಿಸಿದ್ದು ಪ್ರಮುಖ ಆರೋಪಿ ಜಗದೀಶ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಲಾಗಿದೆ.

ಏನಿದು ಪ್ರಕರಣ…?
ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದ ಶಿವಪ್ರಕಾಶ್‌ನನ್ನು (ಬಿಕ್ಲು ಶಿವ) ಹಲಸೂರು ಮನೆಯ ಎದುರು ಜುಲೈ 15ರಂದು ರಾತ್ರಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಈ ಪ್ರಕರಣದಲ್ಲಿ 17 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರನ್ನು ಎ5 ಆರೋಪಿ ಎಂದು ಪೊಲೀಸರು ಗುರುತಿಸಿದ್ದರು. ಇನ್ನೂ ಬಂಧಿತರಲ್ಲಿ 9 ಜನರ ವಿರುದ್ಧ ರೌಡಿಶೀಟರ್‌ ತೆರೆಯಲಾಗಿದೆ. ಪ್ರಕರಣದ ಎ1 ಆರೋಪಿ ಜಗದೀಶ್ ಅಲಿಯಾಸ್ ಜಗ್ಗ ಹತ್ಯೆ ಬಳಿಕ ದುಬೈಗೆ ಎಸ್ಕೇಪ್ ಆಗಿದ್ದಾನೆ. ಶಿವಪ್ರಕಾಶ್ ಕೊಲೆಯಾದ ಎರಡೇ ದಿನದಲ್ಲಿ ಜಗದೀಶ್ ಬೆಂಗಳೂರಿನಿಂದ ಚೆನ್ನೈಗೆ ಹೋಗಿ ಅಲ್ಲಿಂದ ದುಬೈಗೆ ಎಸ್ಕೇಪ್ ಆಗಿರುವ ಬಗ್ಗೆ ಅಧಿಕಾರಿಗಳಿಗೆ ದಾಖಲೆಗಳು ಸಿಕ್ಕಿವೆ.

Leave a Reply

Your email address will not be published. Required fields are marked *

error: Content is protected !!