ಉದಯವಾಹಿನಿ, ನವದೆಹಲಿ: ಧರ್ಮಸ್ಥಳ ವಿಚಾರದಲ್ಲಿ ಸೂಕ್ಷ್ಮವಾಗಿ ವರ್ತಿಸಬೇಕಿದ್ದ ರಾಜ್ಯ ಸರ್ಕಾರ ಅತ್ಯಂತ ಬೇಜವಾಬ್ದಾರಿತನದಿಂದ ನಡೆದುಕೊಂಡಿದೆ. ಏನೊಂದೂ ಸಿಗದಿದ್ದಕ್ಕೆ ಸಿಎಂ ಈಗ ವರಸೆ ಬದಲಿಸುತ್ತಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಲ್‌ಪಿ ಸಭೆಯಲ್ಲಿ ‘ಧರ್ಮಸ್ಥಳ ತನಿಖೆಯಲ್ಲಿ ಸರ್ಕಾರದ ಪಾತ್ರವಿಲ್ಲ’ ಎಂದಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಕೇಂದ್ರ ಸಚಿವರು, ಎಸ್‌ಐಟಿ ರಚಿಸಿದ್ದು ತಾವೇ ಅಲ್ಲವೇ? ಎಂದು ತಿರುಗೇಟು ಕೊಟ್ಟಿದ್ದಾರೆ.
ಎಸ್‌ಐಟಿ ರಚಿಸಿ ತನಿಖೆಗೆ ಆದೇಶಿಸಿದ ಸಿಎಂ ಈಗ ಸರ್ಕಾರದ ಪಾತ್ರವಿಲ್ಲವೆಂದು ಉಲ್ಟಾ ಹೊಡೆಯುತ್ತಿದ್ದಾರೆ. ಪರ-ವಿರೋಧ ಚರ್ಚೆಯ ನಡುವೆಯೇ ತರಾತುರಿಯಲ್ಲಿ ಎಸ್‌ಐಟಿ ರಚಿಸಿ ಉತ್ಖನನಕ್ಕೆ ಆದೇಶ ನೀಡಿದ್ದು ತಾವೇ ಅಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.
