ಉದಯವಾಹಿನಿ, ನವದೆಹಲಿ: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ನಡೆಸಲಾಗುತ್ತಿರುವ ‘ಹರ್‌ ಘರ್‌ ತಿರಂಗ’ ಅಭಿಯಾನಕ್ಕೆ ಗೃಹ ಸಚಿವ ಅಮಿತ್‌ ಶಾ ಚಾಲನೆ ನೀಡಿದ್ದಾರೆ. ಪತ್ನಿ ಸೋನಲ್ ಶಾ ಅವರೊಂದಿಗೆ ದೆಹಲಿಯ ಕೃಷ್ಣ ಮೆನನ್ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಅಮಿತ್‌ ಶಾ ತ್ರಿವರ್ಣ ಧ್ವಜ ಹಾರಿಸಿದ್ದಾರೆ. ಟೆರೇಸ್‌ನಲ್ಲಿ ತಿರಂಗ ಹಾರಿಸುತ್ತಿರುವ ವೀಡಿಯೋ ವೈರಲ್‌ ಆಗಿದೆ. ಆಜಾದಿ ಕಾ ಅಮೃತ್ ಮಹೋತ್ಸವದ ಆಶ್ರಯದಲ್ಲಿ ಪ್ರಾರಂಭಿಸಲಾದ ಹರ್ ಘರ್ ತಿರಂಗ ಅಭಿಯಾನದ 4 ನೇ ಆವೃತ್ತಿಯನ್ನು ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ ಘೋಷಿಸಿತು. ದೇಶಾದ್ಯಂತ ನಾಗರಿಕರು ಭಾರತೀಯ ರಾಷ್ಟ್ರೀಯ ಧ್ವಜವಾದ ತಿರಂಗವನ್ನು ಮನೆ ಮೇಲೆ ಹಾರಿಸುವಂತೆ ಪ್ರೇರೇಪಿಸಿತ್ತು. ದೇಶಾದ್ಯಂತ ನಡೆಸಲಾದ ಈ ಅಭಿಯಾನವು ಜನಾಂದೋಲನವಾಗಿ ಮಾರ್ಪಟ್ಟಿದೆ. ಅಭಿಯಾನದ ನಾಲ್ಕನೇ ವರ್ಷದಲ್ಲಿ 5 ಲಕ್ಷಕ್ಕೂ ಹೆಚ್ಚು ಮಂದಿ ನೋಂದಾಯಿಸಿಕೊಂಡಿದ್ದಾರೆ ಎಂದು ಸಂಸ್ಕೃತಿ ಸಚಿವಾಲಯ ತಿಳಿಸಿದೆ. ಈ ವರ್ಷ ನಾವು ತಿರಂಗಾ ಅಭಿಯಾನದ ನಾಲ್ಕನೇ ಆವೃತ್ತಿಯನ್ನು ಆಚರಿಸಲಿದ್ದೇವೆ. ಇದಕ್ಕಾಗಿ 5 ಲಕ್ಷಕ್ಕೂ ಹೆಚ್ಚು ಜನರು ಸ್ವಯಂಸೇವಕರಾಗಿ ನೋಂದಾಯಿಸಿಕೊಂಡಿದ್ದಾರೆ. ಆ ಮೂಲಕ ತಿರಂಗಾ ಅಭಿಯಾನಕ್ಕೆ ಜನರನ್ನು ಪ್ರೇರೇಪಿಸುತ್ತಾರೆ ಎಂದು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!