ಉದಯವಾಹಿನಿ, ನವದೆಹಲಿ: ದೆಹಲಿಯಲ್ಲಿರುವ ಬೀದಿ ನಾಯಿಗಳನ್ನು ಆಶ್ರಯ ತಾಣಕ್ಕೆ ಸೇರಿಸುವ ಸುಪ್ರಿಂಕೋರ್ಟ್‌ನ ದ್ವಿಸದಸ್ಯ ಪೀಠದ ತೀರ್ಪನ್ನು ಪರಿಶೀಲಿಸುವುದಾಗಿ ಸಿಜೆಐ ಬಿ.ಆರ್. ಗವಾಯಿಯವರು ತಿಳಿಸಿದ್ದಾರೆ. ಹೆಚ್ಚುತ್ತಿರುವ ನಾಯಿ ಕಡಿತ ಮತ್ತು ರೇಬೀಸ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಸರ್ವೋಚ್ಚ ನ್ಯಾಯಾಲಯ ಸೋಮವಾರ ಎಲ್ಲಾ ಬೀದಿ ನಾಯಿಗಳನ್ನು ವಸತಿ ಪ್ರದೇಶಗಳಿಂದ ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿತ್ತು. ಇದಕ್ಕೆ ಪರ – ವಿರೋಧದ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ದ್ವಿಸದಸ್ಯ ಪೀಠದ ತೀರ್ಪಿಗೆ ಕಳವಳ ವ್ಯಕ್ತವಾಗುತ್ತಿರುವ ವಿಚಾರ ಬುಧವಾರ ಸಿಜೆಐ ಮುಂದೆ ಚರ್ಚೆಗೆ ಬಂತು. ಈ ವೇಳೆ, ತೀರ್ಪನ್ನು ಮರುಪರಿಶೀಲಿಸುವುದಾಗಿ ಭಾರತದ ಮುಖ್ಯ ನ್ಯಾಯಮೂರ್ತಿಗಳು ತಿಳಿಸಿದ್ದಾರೆ. ಸಿಜೆಐ ಹೇಳಿಕೆಯಿಂದ ಸುಪ್ರೀಂ ಕೋರ್ಟ್‌ನ ತೀರ್ಪಿನೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದ ಸಾವಿರಾರು ಪ್ರಾಣಿ ಪ್ರಿಯರಲ್ಲಿ ಭರವಸೆ ಮೂಡಿದೆ.
ನ್ನೂ ಸುಪ್ರೀಂ ಕೋರ್ಟ್ ಆದೇಶಕ್ಕೆ ರಾಜಕಾರಣಿಗಳು ಮತ್ತು ಸೆಲೆಬ್ರಿಟಿಗಳು ಸೇರಿದಂತೆ ನಾಗರಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆದೇಶವನ್ನು ಪರಿಶೀಲಿಸುವಂತೆ ನಟ ಜಾನ್ ಅಬ್ರಹಾಂ ಅವರು ಸಿಜೆಐಗೆ ತುರ್ತು ಮೇಲ್ಮನವಿ ಸಲ್ಲಿಸಿದ್ದರು.
