ಉದಯವಾಹಿನಿ, ನವದೆಹಲಿ: ಕಾಂಗ್ರೆಸ್ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ 1980ರ ದಶಕದಲ್ಲಿ ಚುನಾವಣಾ ಕಾನೂನನ್ನು ಉಲ್ಲಂಘಿಸಿದ್ದಾರೆ. ಅಧಿಕೃತವಾಗಿ ಭಾರತೀಯ ನಾಗರಿಕರಾಗುವ ಮೂರು ವರ್ಷಗಳ ಮೊದಲು ಮತದಾರರ ಪಟ್ಟಿಯಲ್ಲಿ ಅವರ ಹೆಸರು ಕಾಣಿಸಿಕೊಂಡಿದೆ ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಆರೋಪಿಸಿದ್ದಾರೆ. ಬಿಹಾರದಲ್ಲಿ ಮತದಾರರ ವಿಶೇಷ ತೀವ್ರ ಪರಿಷ್ಕರಣೆ ನೆಪದಲ್ಲಿ ಅಕ್ರಮ ನಡೆಸಲಾಗುತ್ತಿದೆ. ಕರ್ನಾಟಕದಲ್ಲಿ ಮತಗಳವು ಮಾಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮತ್ತು ಬಿಜೆಪಿ ವಿರುದ್ಧ ಆರೋಪ ಮಾಡುತ್ತಿರುವ ಕಾಂಗ್ರೆಸ್‌ಗೆ ಈ ಮೂಲಕ ಬಿಜೆಪಿ ತಿರುಗೇಟು ನೀಡಿದೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ 1980 ರ ಮತದಾರರ ಪಟ್ಟಿಯ ಸಾರದ ನಕಲು ಪ್ರತಿಯನ್ನು ಪೋಸ್ಟ್ ಮಾಡಿರುವ ಅವರು, ಸೋನಿಯಾ ಅಧಿಕೃತವಾಗಿ ಭಾರತೀಯ ನಾಗರಿಕರಾಗುವ ಮೂರು ವರ್ಷಗಳ ಮೊದಲು ಮತದಾರರ ಪಟ್ಟಿಯಲ್ಲಿ ಅವರ ಹೆಸರು ಕಾಣಿಸಿಕೊಂಡಿದೆ. 1950 ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 16 ರ ಪ್ರಕಾರ, ಭಾರತದ ನಾಗರಿಕರಲ್ಲದ ವ್ಯಕ್ತಿಯನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಅನರ್ಹಗೊಳಿಸಲಾಗುತ್ತದೆ
ಸೋನಿಯಗಾಂಧಿ ಅವರು ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲು ಮತ್ತು ಅವರು ಇನ್ನೂ ಇಟಾಲಿಯನ್ ಪೌರತ್ವವನ್ನು ಹೊಂದಿದ್ದರು. ಆ ಸಮಯದಲ್ಲಿ, ಗಾಂಧಿ ಕುಟುಂಬವು ಪ್ರಧಾನಿ ಇಂದಿರಾ ಗಾಂಧಿಯವರ ಅಧಿಕೃತ ನಿವಾಸವಾದ 1, ಸಫ್ದರ್ಜಂಗ್ ರಸ್ತೆಯಲ್ಲಿ ವಾಸಿಸುತ್ತಿದ್ದರು. ಅಲ್ಲಿಯವರೆಗೆ, ಆ ವಿಳಾಸದಲ್ಲಿ ನೋಂದಾಯಿಸಲಾದ ಮತದಾರರು ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸಂಜಯ್ ಗಾಂಧಿ ಮತ್ತು ಮೇನಕಾ ಗಾಂಧಿಯಾಗಿದ್ದರು.
