ಉದಯವಾಹಿನಿ , ಚಿಕ್ಕಮಗಳೂರು: ಮೂಡಿಗೆರೆಯ ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿವಾಹಿತ ಮಹಿಳೆಯೊಬ್ಬಳು ಅನ್ಯಕೋಮಿನ ಯುವಕನ ಜೊತೆ ಪರಾರಿಯಾಗಿದ್ದು, ಹಿಂದೂ ಮುಖಂಡರ ಆಕ್ರೋಶಕ್ಕೆ ಕಾರಣವಾಗಿದೆ.
2 ವರ್ಷದ ಹಿಂದೆ ಮದುವೆಯಾಗಿದ್ದ 22 ವರ್ಷದ ಮಹಿಳೆ ಅನ್ಯಕೋಮಿನ ಯುವಕನ ಜೊತೆ ಪರಾರಿಯಾಗಿದ್ದಳು. ಈ ಸಂಬಂಧ ಮಹಿಳೆಯ ಪತಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನನ್ವಯ ಬಣಕಲ್ ಪೊಲೀಸರು ಮಹಿಳೆಯನ್ನು ಪತ್ತೆ ಮಾಡಿ, ಪೊಲೀಸ್ ಠಾಣೆಗೆ ಕರೆತಂದಿದ್ದರು. ಈ ವಿಚಾರ ಗೊತ್ತಾಗುತ್ತಿದ್ದಂತೆ ಪೊಲೀಸ್ ಠಾಣೆಯ ಮುಂದೆ ಹಿಂದೂ ಮುಖಂಡರು ಜಮಾಯಿಸಿದ್ದರು. ಈ ವೇಳೆ ಹಿಂದೂ ಮುಖಂಡರಿಗೆ ಠಾಣೆಯ ಒಳಗೆ ಬರದಂತೆ ತಡೆಯಲು ಗೇಟ್ ಬಂದ್ ಮಾಡಲಾಗಿದೆ. ಇದರಿಂದ ಹಿಂದೂ ಸಂಘಟನೆಯ ಮುಖಂಡರು ರಸ್ತೆ ತಡೆದು ಪ್ರತಿಭಟನೆ (Protest) ನಡೆಸಿದ್ದಾರೆ. ಸಂಘಟಕರು- ಗ್ರಾಮಸ್ಥರ ಮನವೊಲಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ಠಾಣೆ ಮುಂಭಾಗಕ್ಕೆ ಬಿಡುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!