ಉದಯವಾಹಿನಿ, ಬೆಂಗಳೂರು: ಸುಪ್ರೀಂ ಕೋರ್ಟ್‌ನಿಂದ ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನ್‌ (Darshan) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ನೆಲೆಸಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಇದ್ದ ದರ್ಶನ್‌ ಅವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಮೊದಲು ದರ್ಶನ್‌ ಅವರು ನ್ಯಾಯಾಲಯಕ್ಕೆ ಶರಣಾಗುತ್ತಾರೆ ಎಂಬ ಸುದ್ದಿ ಬಂದಿತ್ತು. ಆದರೆ ಪೊಲೀಸರು ದರ್ಶನ್‌ ನ್ಯಾಯಾಲಯಕ್ಕೆ ಶರಣಾಗುವ ಮೊದಲೇ ಪೊಲೀಸರು ಅಪಾರ್ಟ್‌ಮೆಂಟ್‌ಗೆ ತೆರಳಿ ಅವರನ್ನು ಅರೆಸ್ಟ್‌ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಎರಡನೇ ಆರೋಪಿಯಾಗಿದ್ದಾರೆ. ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರನ್ನು ಈ ಮೊದಲೇ ಪೊಲೀಸರು ಅರೆಸ್ಟ್‌ ಮಾಡಿದ್ದರು.

Leave a Reply

Your email address will not be published. Required fields are marked *

error: Content is protected !!