ಉದಯವಾಹಿನಿ, ತುಮಕೂರು: ಮಾಜಿ ಸಚಿವ ಕೆಎನ್ ರಾಜಣ್ಣರನ್ನು ವಜಾಗೊಳಿಸಿರೋದಕ್ಕೆ ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮಿಜಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಶ್ರೀಗಳು, ರಾಜಣ್ಣರ ಅವರು ಸಹಕಾರಿ ಧುರೀಣರು, ಸಹಕಾರಿ ಕ್ಷೇತ್ರಕ್ಕೆ ಅವರದ್ದೇ ಕೊಡುಗೆ ಇದೆ. ಸಹಕಾರಿ ಮಹಾಮಂಡಲದ ಅಧ್ಯಕ್ಷರಾಗಿದ್ದ ಅವರು, ಬಡವರಿಗೆ, ರೈತರಿಗೆ ಸಹಾಯ ಮಾಡಲೆಂದೇ ಸಹಕಾರಿ ಖಾತೆ ಪಡೆದಿದ್ದರು. ಅದರಿಂದ ಜನರಿಗೆ ಅನುಕೂಲ ಕೂಡ ಮಾಡುತಿದ್ದರು. ಈಗ ಇದ್ದಕ್ಕಿದ್ದ ಹಾಗೆ ಸಂಪುಟದಿಂದ ಕೈಬಿಟ್ಟಿದ್ದಾರೆ ಅನ್ನೋ ಸುದ್ದಿ ಕೇಳಿ ಆಘಾತವಾಗಿದೆ ಎಂದು ಬೇಸರಿಸಿದರು.

ಯಾವಾಗಲೂ ರಾಜಣ್ಣ ನೇರ ನಿಷ್ಠುರವಾಗಿ ಮಾತನಾಡುವ ವ್ಯಕ್ತಿ. ಅವರ ಮನಸ್ಸಿನಲ್ಲಿ ಕೆಡುಕಿಲ್ಲ. ಅಂಥಹ ವ್ಯಕ್ತಿಯನ್ನು ಸಂಪುಟದಿಂದ ಕೈ ಬಿಟ್ಟಿರೋದು ನಿಜಕ್ಕೂ ಯೋಚಿಸಬೇಕಾದ ವಿಚಾರ ಎಂದು ಬೇಸರಿಸಿದರು. ಅವರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುತ್ತಾರೆ ಎಂಬ ಭರವಸೆಯನ್ನು ಶ್ರೀಗಳು ವ್ಯಕ್ತಪಡಿಸಿದ್ದಾರೆ. ಅವರಿಗೆ ಮತ್ತೊಂದು ಅವಕಾಶ ಕೊಟ್ಟರೆ ಪಕ್ಷಕ್ಕೆ ಹಾಗೂ ಜನರಿಗೆ ಒಳ್ಳೆದಾಗುತ್ತದೆ. ಸಿಎಂ ಈ ವಿಚಾರದಲ್ಲಿ ಗಮನಹರಿಸಿ ಹೈಕಮಾಂಡ್‌ಗೆ ಮನವೊಲಿಸಿ ಮತ್ತೆ ರಾಜಣ್ಣರನ್ನು ಸಂಪುಟ ಸೇರಿಸಿಕೊಳ್ಳಲಿ ಎಂದು ಆಗ್ರಹಿಸಿದರು.

Leave a Reply

Your email address will not be published. Required fields are marked *

error: Content is protected !!