ಉದಯವಾಹಿನಿ, ನವದೆಹಲಿ: ದೆಹಲಿಯ ಹುಮಾಯೂನ್ ಸಮಾಧಿ ಬಳಿಯ ಮಸೀದಿಯ ಒಂದು ಭಾಗದ ಮೇಲ್ಛಾವಣಿ ಕುಸಿದು ಐವರು ಮೃತಪಟ್ಟಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.ದರ್ಗಾ ಷರೀಫ್ ಪಟ್ಟೆ ಷಾ ನಿಜಾಮುದ್ದೀನ್ ಪೂರ್ವದಲ್ಲಿರುವ ಹುಮಾಯೂನ್ ಸಮಾಧಿಯ ಬಳಿಯ ಮಸೀದಿಯ ಒಂದು ಬದಿಯ ಛಾವಣಿ ಕುಸಿದು ಮೂವರು ಮಹಿಳೆಯರು, ಇಬ್ಬರು ಪುರುಷರು ಮೃತಪಟ್ಟಿದ್ದಾರೆ.
ಅವಶೇಷಗಳಡಿ ಸಿಲುಕಿದ 11 ಮಂದಿಯನ್ನು ರಕ್ಷಣಾ ಸಿಬ್ಬಂದಿಗಳು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳದಲ್ಲಿ ರಾಷ್ಟ್ರೀಯ ವಿಪತ್ತು ಪಡೆ, ಅಗ್ನಿಶಾಮಕ ದಳ ಮತ್ತು ಸ್ಥಳೀಯ ಪೊಲೀಸರಿಂದ ಶೋಧ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
