ಉದಯವಾಹಿನಿ, ಬೆಂಗಳೂರು: ಮತ್ತೆ ಜೈಲು ಸೇರಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಢವಢವ ಶುರುವಾಗಿದೆ. ಏಕೆಂದ್ರೆ ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗೆ ಮನವಿ ಸಲ್ಲಿಸಲು ಪೊಲೀಸರು ತಯಾರಿ ನಡೆಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.ಇತ್ತೀಚೆಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತ್ವರಿತಗತಿಯಲ್ಲಿ ಕೇಸ್ ಇತ್ಯರ್ಥಕ್ಕೆ ಸೂಚನೆ ನೀಡಿತ್ತು. ಹೀಗಾಗಿ ಫಾಸ್ಟ್ ಟ್ರ್ಯಾಕ್ ಕೋರ್ಟ್ ರಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಲು ಪೊಲೀಸರು ತಯಾರಿ ನಡೆಸಿದ್ದಾರೆ.
6 ತಿಂಗಳ ಒಳಗೆ ಟ್ರಯಲ್ ಮುಗಿಸಿ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡುವುದಲ್ಲದೇ ಆರೋಪಿಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಪೊಲೀಸರು ಈ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕಾನೂನು ಇಲಾಖೆ (Law Department) ಜೊತೆಗೆ ಚರ್ಚಿಸಿ ಸೋಮವಾರ ಸರ್ಕಾರಕ್ಕೆ ಮನವಿ ಮಾಡುವ ಸಾಧ್ಯತೆಗಳಿಗೆ ಎಂದು ಉನ್ನತ ಮೂಲಗಳು ತಿಳಿಸಿವೆ.
