ಉದಯವಾಹಿನಿ, ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಪ್ರಸ್ತುತ ಮುಖ್ಯ ತರಬೇತುದಾರ ಗೌತಮ್ ಗಂಭೀರ್ ಸುದ್ದಿಯಲ್ಲಿದ್ದಾರೆ. ಗಂಭೀರ್ ಮತ್ತು ಧೋನಿ ಬಹಳ ದಿನಗಳ ನಂತರ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಇಬ್ಬರೂ ವಿವಾಹ ಸಮಾರಂಭಕ್ಕೆ ಆಗಮಿಸಿದ್ದರು. ಇಲ್ಲಿ ಇಬ್ಬರೂ ಒಟ್ಟಿಗೆ ಮಾತನಾಡುತ್ತಿರುವುದು ಕಂಡುಬಂದಿದೆ. ಸೋಶಿಯಲ್‌ ಮೀಡಿಯಾದಲ್ಲಿಯೂ ಈ ಫೋಟೋಗಳು ಹಾಗೂ ವಿಡಿಯೊಗಳು ವೈರಲ್‌ ಆಗಿದೆ. ಧೋನಿ ಮತ್ತು ಗಂಭೀರ್ ಒಟ್ಟಿಗೆ ಕಾಣಿಸಿಕೊಂಡಿರುವ ಬಗ್ಗೆ ಏಕೆ ಇಷ್ಟೊಂದು ಚರ್ಚೆ ನಡೆಯುತ್ತಿದೆ ಎಂಬ ಪ್ರಶ್ನೆ ಎದುರಾಗುವುದು ಸಹಜ. ಇದಕ್ಕೆ ಕಾರಣ ಗೌತಮ್ ಗಂಭೀರ್, ಧೋನಿ ಬಗ್ಗೆ ಈ ಹಿಂದೆ ನೀಡಿದ್ದ ಬಹಿರಂಗ ಹೇಳಿಕೆಗಳು.
ಎಂಎಸ್‌ ಧೋನಿ ನಾಯಕತ್ವದಲ್ಲಿ ಭಾರತ ತಂಡ 2007ರ ಟಿ20 ವಿಶ್ವಕಪ್ ಮತ್ತು 2011ರ ಏಕದಿನ ವಿಶ್ವಕಪ್‌ ಗೆಲುವಿನಲ್ಲಿ ಗೌತಮ್‌ ಗಂಭೀರ್‌ ತಮ್ಮ ಬ್ಯಾಟಿಂಗ್‌ನಲ್ಲಿ ಕೊಡುಗೆಯನ್ನು ನೀಡಿದ್ದರು. ಆದರೆ ಯಾರೂ ಕೂಡ ಗೌತಮ್‌ ಗಂಭೀರ್‌ ಅವರನ್ನು ಗುರಿತಿಸಲಿಲ್ಲ. ಈ ಎರಡು ವಿಶ್ವಕಪ್ ಟೂರ್ನಿಗಳ ಬಗ್ಗೆ ಗಂಭೀರ್ ಚರ್ಚಿಸಿದಾಗಲೆಲ್ಲಾ, ಧೋನಿ ತಂಡವನ್ನು ಒಬ್ಬಂಟಿಯಾಗಿ ಚಾಂಪಿಯನ್ ಮಾಡಲಿಲ್ಲ ಎಂದು ಅವರು ಸ್ಪಷ್ಟವಾಗಿ ಹೇಳಿದ್ದರು.

Leave a Reply

Your email address will not be published. Required fields are marked *

error: Content is protected !!